Site icon ಸುದ್ದಿ ಸಂಗ್ರಹ

‘ನಾಗಾವಿ ನಕ್ಷತ್ರ’ ಗ್ರಂಥ ಲೋಕಾರ್ಪಣೆ ಇಂದು

ಸುದ್ದಿ ಸಂಗ್ರಹ ಚಿತ್ತಾಪುರ
ಪತ್ರಕರ್ತ, ಸಾಹಿತಿ ದಿ.ನಾಗಯ್ಯ ಸ್ವಾಮಿ ಅಲ್ಲೂರ ಅವರ ಕುರಿತು ‘ನಾಗಾವಿ ನಕ್ಷತ್ರ’ ಸಂಸ್ಕರಣ ಗ್ರಂಥ ಲೋಕಾರ್ಪಣೆ ಸಮಾರಂಭ ಜ.25 ರಂದು ರವಿವಾರ ಬೆಳಗ್ಗೆ 11.30 ನಡೆಯಲಿದೆ ಎಂದು ಗ್ರಂಥದ ಪ್ರಧಾನ ಸಂಪಾದಕ ಲಿಂಗಪ್ಪ ಮಲ್ಕನ್ ತಿಳಿಸಿದ್ದಾರೆ.

ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಕಾರ್ಯಕ್ರಮ ಉದ್ಘಾಟಿಸಿ, ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ.

ಕಂಬಳೇಶ್ವರ ಮಠದ ಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯರು, ಹಲಕರ್ಟಿ ಕಟ್ಟಿಮನಿ ಹಿರೇಮಠದ ಪೂಜ್ಯ ಶ್ರೀ ಅಭಿನವ ಮುನೀಂದ್ರ ಶಿವಾಚಾರ್ಯರು ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು.

ಕಲಬುರಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಸೇಡಂ ಪುಸ್ತಕ ಪರಿಚಯ ಮಾಡುವರು.

ಗಣ್ಯರಾದ ನಾಗರೆಡ್ಡಿ ಪಾಟೀಲ್ ಕರದಾಳ, ಲಿಂಗಾರೆಡ್ಡಿಗೌಡ ಭಾಸರೆಡ್ಡಿ. ಭೀಮಣ್ಣ ಸಾಲಿ, ಸೋಮಶೇಖರ ಪಾಟೀಲ ಬೆಳಗುಂಪಾ, ಚಂದ್ರಶೇಖರ ಅವಂಡಿ, ತಹಸೀಲ್ದಾರ್, ನಾಗಯ್ಯ ಹಿರೇಮಠ, ಡಿವೈಎಸ್ಪಿ ಶಂಕರಗೌಡ ಪಾಟೀಲ್‌, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಸಿದ್ದಮ್ಮ ನಾಗಯ್ಯಸ್ವಾಮಿ ಅಲ್ಲೂ‌ರ ಉಪಸ್ಥಿತರಿರುವರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಕಾರ್ಯದರ್ಶಿ ವೀರೇಂದ್ರಕುಮಾರ ಕೊಲ್ಲೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ದಿ.ನಾಗಯ್ಯಸ್ವಾಮಿ ಅಲ್ಲೂರ ಅಭಿಮಾನಿಗಳು,
ಗೆಳೆಯರು ಭಾಗವಹಿಸಬೇಕೆಂದು ಕೋರಿದ್ದಾರೆ.‌

Exit mobile version