ಸುದ್ದಿ ಸಂಗ್ರಹ ಕಲಬುರಗಿ
ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಪ್ರಮುಖ. ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವಾಗಿದ್ದು, ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದೆ ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಸೂಕ್ತ ವ್ಯಕ್ತಿಗೆ ಮತದಾನ ಮಾಡಿ, ಚುನಾಯಿಸಿದರೆ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು.
ನಗರದ ಶಹಾಬಜಾರ ಮಹಾದೇವ ನಗರದಲ್ಲಿ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘16ನೇ ರಾಷ್ಟ್ರೀಯ ಮತದಾರರ ದಿನಾಚರಣೆ’ಯಲ್ಲಿ ಪ್ರತಿಜ್ಞೆ ವಿಧಿ ಬೋಧಿಸಿ ಮಾತನಾಡಿದ ಅವರು, ಮತದಾನ ಮಾಡುವ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಮತದಾನ ಭವಿಷ್ಯ ಬದಲಿಸಬಲ್ಲದು. ದೇಶದ ಅಭಿವೃದ್ಧಿಗೆ ಕಡ್ಡಾಯ ಮತದಾನ ಮಾಡಿ ಉತ್ತಮ ಜನನಾಯಕ ದೊರೆಯಲು ಸಾಧ್ಯ ಎಂದರು.
ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಸಾಲಿ ಮಾತನಾಡಿ, ಜ್ಞಾನಿ ಮತ್ತು ಸಮಾಜದ ಕಳಕಳಿಯುಳ್ಳ ವ್ಯಕ್ತಿ ಯಾವುದೆ ಆಸೆ-ಆಮಿಸೆಗಳಿಗೆ ಒಳಗಾಗದೆ ಪ್ರಾಮಾಣಿಕವಾಗಿ ಮತದಾನ ಮಾಡಿ ಚುನಾಯಿಸಿದರೆ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಲು ಸಾಧ್ಯ ಎಂದು ಮಾರ್ಮಿಕವಾಗಿ ನುಡಿದರು.
ಸಮಾಜ ಸೇವಕ ಶಿವಯೋಗೆಪ್ಪಾ ಎಎಸ್.ಬಿರಾದಾರ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಶಾಲೆಯ ಶಿಕ್ಷಕಿಯರಾದ ಶಿಲ್ಪಾ, ಖಮರುನ್ನೀಸಾ, ಪ್ರೀತಿ, ಪೂರ್ಣಿಮಾ, ಪ್ರಿಯಾಂಕಾ, ವರ್ಷಾರಾಣಿ, ಚಂದ್ರಲೇಖಾ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.