ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿ ವಿತರಣೆ

ಪಟ್ಟಣದ

ಸುದ್ದಿ ಸಂಗ್ರಹ ಚಿತ್ತಾಪುರ
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವೈಯಕ್ತಿಕ ಹಣದ ನೆರವಿನಡಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಹಾಯವಾಗಲೆಂದು ಪಠ್ಯಪುಸ್ತಕಕ್ಕೆ ಅನುಗುಣವಾಗಿ ಮಾದರಿ ಪ್ರಶ್ನೆ ಪತ್ರಿಕೆಗಳ ಕೈಪಿಡಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಮಂಗಳವಾರ ವಿತರಣೆ ಮಾಡಿದರು.

ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯವಾರು ಒಟ್ಟು 35 ಸಾವಿರ ಮಾದರಿ ಪ್ರಶ್ನೆ ಪತ್ರಿಕೆಗಳ ಕೈಪಿಡಿ ವಿತರಣೆ ಮಾಡಲಾಗಿದೆ.

ಈ ಪೈಕಿ ಚಿತ್ತಾಪುರ ತಾಲೂಕಿನ ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗಾಗಿ 4,800 ಪ್ರತಿ ಒದಗಿಸಲಾಗಿದೆ. ಅಯಾ ಶಾಲೆಗಳ ಶಿಕ್ಷಕರು ಸೋಮವಾರ ಶೇ 95ರಷ್ಟು ಕೈಪಿಡಿ ವಿತರಣೆ ಮಾಡಿದ್ದಾರೆ ಎಂದರು.

Leave a Reply

Your email address will not be published. Required fields are marked *