ಕನ್ನಡ ಶಾಲೆ ಉಳಿಸಿ- ಬೆಳೆಸಿ ಅಭಿಯಾನದ ಚಿತ್ತಾಪುರ ನಗರಾಧ್ಯಕ್ಷರಾಗಿ ಕುಮಾರ ಜಾಧವ ನೇಮಕ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಕಲಬುರಗಿ
ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸರ್ಕಾರಿ ಶಾಲೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಶಾಲೆ ಉಳಿಸಿ- ಬೆಳೆಸಿ ಅಭಿಯಾನ’ ಸಂಘಟನೆಯ ಚಿತ್ತಾಪುರ ನಗರಾಧ್ಯಕ್ಷರಾಗಿ ಕುಮಾರ ಜಾಧವರನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಅಣ್ಣಾರಾಯ ವಿ ಇವಣಿ ಹೇಳಿದರು.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಿಮಗೆ ವಹಿಸಲಾದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿ, ತಾಲೂಕಿನಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠಗೊಳಿಸಬೇಕು. ವಿದ್ಯಾರ್ಥಿಗಳಿಗೆ ಅಭಿಯಾನದ ಉದ್ದೇಶ ತಿಳಿಸಿ, ಕನ್ನಡ ವಿಷಯದಲ್ಲಿ 100ಕ್ಕೆ 100ರಷ್ಟು ಅಂಕ ಫಲಿತಾಂಶದಲ್ಲಿ ಪಡೆಯುವಂತೆ ಪ್ರೇರೇಪಿಸಬೇಕು ಎಂದು ಸೂಚಿಸಿದರು.

ಕನ್ನಡ ಶಾಲೆಗಳ ಬಲವರ್ಧನೆ, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಮತ್ತು ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದಿಂದ ಈ ಅಭಿಯಾನ ಕಾರ್ಯನಿರ್ವಹಿಸುತ್ತಿದೆ. ಸಂಘಟನೆಯ ಹಿರಿಯರ ಮತ್ತು ಕಾರ್ಯಕರ್ತರ ಒಮ್ಮತದ ನಿರ್ಧಾರದ ಮೇರೆಗೆ ಕುಮಾರ ಜಾಧವ ಅವರಿಗೆ ಈ ಮಹತ್ವದ ಜವಾಬ್ದಾರಿ ವಹಿಸಲಾಗಿದೆ ಎಂದರು.

Leave a Reply

Your email address will not be published. Required fields are marked *