Site icon ಸುದ್ದಿ ಸಂಗ್ರಹ

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ ಕಾರ್ಡ್ ಪತ್ತೆ

ಸುದ್ದಿ ಸಂಗ್ರಹ ಮಂಗಳೂರು
ಇಲ್ಲಿನ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ.

ಸಾವಿರಾರು ಆಧಾರ್ ಕಾರ್ಡ್‌ಗಳು ಬಿದ್ದಿರುವುದನ್ನು ಕಂಡ ಸಾರ್ವಜನಿಕರು ಶಾಕ್ ಆಗಿದ್ದು, ತಕ್ಷಣ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸ್ಥಳೀಯರು ಎಲ್ಲಾ ಆಧಾರ್ ಕಾರ್ಡ್‌ ಸಂಗ್ರಹಿಸಿದ್ದಾರೆ.

ಆಧಾರ್ ಕಾರ್ಡ್ ದುರುಪಯೋಗ ಅಥವಾ ನಿರ್ಲಕ್ಷ್ಯದ ಬಗ್ಗೆ ಸೂಕ್ತ ತನಿಖೆ ನಡೆಸಲು ಅಧಿಕಾರಿಗಳಿಗೆ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. ಈ ಕೃತ್ಯದ ಹಿಂದೆ ಇರುವವರನ್ನು ತಕ್ಷಣ ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Exit mobile version