ಚಿತ್ತಾಪುರ: ಪಟ್ಟಣದ ಐತಿಹಾಸಿಕ ನಾಗಾವಿ ಕ್ಷೇತ್ರದ ಶಕ್ತಿ ದೇವತೆ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ (ಪಲ್ಲಕ್ಕಿ ಉತ್ಸವ) ನಾಳೆ ಗುರುವಾರ ಇರುವದರಿಂದ ದೂರ ದೂರದ ಊರುಗಳಿಂದ ಬರುವ ಭಕ್ತಾದಿಗಳಿಗೆ ಪಾರ್ಕಿಂಗ್ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ, ಹೀಗಾಗಿ ನಿಗದಿತವಾಗಿ ಗೊತ್ತು ಪಡಿಸಿದ ಸ್ಥಳಗಳಲ್ಲಿ ವಾಹನಗಳ ಪಾರ್ಕಿಂಗ್ ಮಾಡುವ ಮೂಲಕ ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಪಿಎಸ್‌ಐ ಶ್ರೀಶೈಲ್ ಅಂಬಾಟಿ ಹೇಳಿದ್ದಾರೆ.
ನಾಗಾವಿ ಯಲ್ಲಮ್ಮ ದೇವಿಯ ಜಾತ್ರೆಗೆ ಬರುವ ಭಕ್ತಾದಿಗಳು ದಿಗ್ಗಾಂವ ಕ್ರಾಸ್ ದಿಂದ ನಾಗಾವಿ ಯಲ್ಲಮ್ಮ ದೇವಸ್ಥಾನದವರೆಗೆ ರಸ್ತೆಯ ಮೇಲೆ ವಾಹನಗಳನ್ನು ನಿಲ್ಲಿಸಬಾರದು, ಭಕ್ತಾಧಿಗಳ ವಾಹನಗಳಿಗೆ ಪ್ರತ್ಯೇಕವಾಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ, ನಾಲ್ಕು ಚಕ್ರಗಳ ವಾಹನಗಳಿಗೆ ಸಂಜೀವಿನಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಮತ್ತು ದ್ವಿ ಚಕ್ರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ನಾಗಾವಿ ಎಜುಕೇಷನ್ ಹಬ್’ನಲ್ಲಿನ ಬಿ.ಸಿ.ಎಮ್ ಹಾಸ್ಟೆಲ್ ಮುಂದುಗಡೆ ಮಾಡಲಾಗಿದೆ, ತಮ್ಮ ವಾಹನಗಳನ್ನು ಸೂಚಿಸಿದ ಸ್ಥಳದಲ್ಲಿ ಪಾರ್ಕಿಂಗ್ ಮಾಡಿ ಪೊಲೀಸರಿಗೆ ಸಹಕರಿಸಬೇಕು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.