400ಕ್ಕೂ ಹೆಚ್ಚು ಕೆರೆ ತುಂಬಿಸಲು ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್

ಪಟ್ಟಣದ

ಸುದ್ದಿ ಸಂಗ್ರಹ ಚಿತ್ತಾಪುರ
ಕೋಟಿ ರೂ.ವೆಚ್ಚದಲ್ಲಿ ಬೆಣ್ಣೆತೊರ ಜಲಾಶಯಕ್ಕೆ ಕಾಗಿಣಾ ಮತ್ತು ಭೀಮಾ ನದಿ ಸಂಗಮದಿಂದ ನೀರು ತುಂಬಿಸಲಾಗುತ್ತಿದೆ. ಐದು ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿ ನೀಡಿ ಬಡವರ ಮನೆ ಬೆಳಕಾಗಿದ್ದೆವೆ. 400ಕ್ಕೂ ಹೆಚ್ಚು ಕೆರೆಗಳು ತುಂಬಿಸುವ ಕೆಲಸ ಮಾಡುತ್ತೆವೆ ಆ ಮೂಲಕ ನೀರಾವರಿ ಗ್ಯಾರಂಟಿ ನೀಡುತ್ತಿದ್ದೆವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

ಪಟ್ಟಣದಲ್ಲಿ ರವಿವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂ ಗಿಂತ ಹೆಚ್ಚು ಹಣ ಕಲಬುರಗಿ ಜಿಲ್ಲೆಗೆ ನೀಡಲಾಗಿದೆ. ಸುಮಾರು 2 ಸಾವಿರ ಮನೆಗಳನ್ನು ಕೊಳಚೆ ನಿರ್ಮೂಲನ ಮಂಡಳಿಯಿಂದ ಹಂಚಿಕೆ ಮಾಡಲಾಗಿದೆ ಎಂದರು.

ಶಿಕ್ಷಣ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 2000 ಕೆಪಿಎಸ್‌ ಶಾಲೆಗಳನ್ನು ಸ್ಥಾಪಿಸಲು ತೀರ್ಮಾನ ಮಾಡಿದ್ದೆವೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ 330 ಶಾಲೆಗಳನ್ನು ಸ್ಥಾಪಿಸಲಾಗುತ್ತದೆ. ಜೊತೆಗೆ 2.50 ಲಕ್ಷ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು. ಸದ್ಯ 56,000 ಕ್ಕೂ ಅಧಿಕ ಖಾಲಿ ಹುದ್ದೆ ತುಂಬಲು ಈಗಾಗಲೆ ಕ್ರಮವಹಿಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ,
ಇಂದು ವಿಶ್ವ ಮಹಿಳಾ ದಿನವಾಗಿದೆ, ಇದೆ ದಿನದಂತೆ ಕೇಂದ್ರ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಸಿದೆ, ಇದು ಅಚ್ಛಾ ದಿನ ಎಂದು ಟೀಕಿಸಿದರು.

ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿ ಹಾಗೂ ಸ್ವಾಭಿಮಾನದ ಜೀವನ ನಡೆಸುತ್ತಿದ್ದಾರೆ. ನಿಮ್ಮ ದುಡ್ಡನ್ನು ಗ್ಯಾರಂಟಿ ಯೋಜನೆಗಳ ಮೂಲಕ ನಿಮಗೆ ವಾಪಸ್ ಕೊಟ್ಟರೆ, ಬಿಜೆಪಿಯವರು ಟೀಕಿಸುತ್ತಿದ್ದಾರೆ. ಅವರಿಗೆ ಜನರ ದುಡ್ಡು ಜನರಿಗೆ ಮರುಬಳಕೆಯಾಗುವದು ಬೇಕಾಗಿಲ್ಲ ಎಂದು ಹರಿಹಾಯ್ದರು.

1,000 ಜನರಿಗೆ ಸಿಕ್ತು ಮನೆಯ ಹಕ್ಕು ಪತ್ರ
ಕಾರ್ಯಕ್ರಮದಲ್ಲಿ ಒಂದು ಸಾವಿರ ಜನರಿಗೆ ಸೂರು ಕಲ್ಪಿಸುವ ಮನೆಯ ಹಕ್ಕು ಪತ್ರಗಳ ವಿತರಣೆ ಸೇರಿದಂತೆ ಒಟ್ಟಾರೆ ಕ್ಷೇತ್ರದ ಸುಮಾರು 3,000 ಜನರು 7.69 ಕೋಟಿ ರೂ. ಮೊತ್ತದ ವಿವಿಧ ಸೌಲಭ್ಯ ಮನೆಯು ಸಹ ಸಾಕ್ಷಿಯಾಯಿತು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಂದ 419 ಲಕ್ಷ ರೂ ಮೊತ್ತದಲ್ಲಿ ಚಿತ್ತಾಪುರ ಪಟ್ಟಣದಲ್ಲಿ ನಿರ್ಮಿಸಲಾದ ಜಿ+1 ಮಾದರಿ ಮನೆಗಳು 178 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು.

ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ
ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ, ನಮ್ಮ ರಾಜ್ಯಕ್ಕೆ ಭವಿಷ್ಯದ ನಾಯಕರಾಗಿ ಕಲಬುರಗಿ ಜನತೆ ನೀಡಿದ್ದಾರೆ. ಅವರಿಗೆ ನಮ್ಮೆಲ್ಲರ ಪರವಾಗಿ ಕೋಟಿ, ಕೋಟಿ ನಮಸ್ಕಾರಗಳು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯಕ್ಷಮತೆ ಅತ್ಯುತ್ತಮವಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಮಾರ್ಗದರ್ಶನದಲ್ಲಿ ಪ್ರಿಯಾಂಕ್ ಖರ್ಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಯಾವುದೆ ಇಲಾಖೆಯ ಜವಾಬ್ದಾರಿ ನೀಡಿದರು ಅಷ್ಟೆ ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಪಕ್ಷ, ರಾಜ್ಯದ ಅಭಿವೃದ್ಧಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಸರ್ವ ಸಮುದಾಯಗಳ ಏಳಿಗೆಗೆ ದುಡಿಯುತ್ತಿದ್ದಾರೆ ಎಂದರು.

ಡಾ.ಶರಣಪ್ರಕಾಶ ಪಾಟೀಲ, ಶರಣಬಸಪ್ಪ ದರ್ಶನಾಪುರ, ವಿಧಾನ ಪರಿಷತ್‌ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಖನೀಜ್ ಫಾತಿಮಾ, ಜಿಲ್ಲಾಧಿಕಾರಿ ಘೌಜಿಯಾ ತರನ್ನುಮ್, ಜಿ.ಪಂ ಸಿಇಓ ಭಂಗರ್‌ಸಿಂಗ್ ಮೀನಾ ಸೇರಿದಂತೆ ಇತರ ಅಧಿಕಾರಿಗಳು, ಅನೇಕ ಗಣ್ಯರು ಇದ್ದರು.

Leave a Reply

Your email address will not be published. Required fields are marked *