ಸುದ್ದಿ ಸಂಗ್ರಹ ಚಿತ್ತಾಪುರ
ಯಾಗಾಪೂರ ಗ್ರಾಮದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ನಾಲವಾರ ಗ್ರಾಮದ ಸಮಾಜ ಸೇವಕ ಶಿವಕುಮಾರ ಸುಣಗಾರ ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ್ದಾರೆ.
ತಾಲೂಕಿನ ಯಾಗಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ದೂರದ ನಾಲವಾರ ಗ್ರಾಮಕ್ಕೆ ಹೋಗಬೇಕಾಗಿದ್ದು, ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ತೆರಳುವ ಉದ್ದೇಶದಿಂದ ನಾಲವಾರ ಗ್ರಾಮದ ಸಮಾಜ ಸೇವಕ ಮತ್ತು ಕೋಲಿ ಸಮಾಜದ ಯುವ ಮುಖಂಡ ಶಿವಕುಮಾರ ಸುಣಗಾರ ಉಚಿತ ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
ಉಚಿತ ವಾಹನ ವ್ಯವಸ್ಥೆ ಮಾಡಿಕೊಟ್ಟಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದೆ ಎಂದು ಗ್ರಾಮಸ್ಥರು ಹಾಗೂ ಮಕ್ಕಳ ಪಾಲಕರು ಮತ್ತು ಶಿಕ್ಷಕ ವೃಂದದವರು ಸುಣಗಾರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.