ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೆನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಜಿಲ್ಲೆ

ಸುದ್ದಿ ಸಂಗ್ರಹ ಕಾರವಾರ
ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೆನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ.

ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆ
ಹೆರಿಗೆ ಮಾಡಿದರೆ ಯಾಕೆ ಹಣ ಪಡೆಯುತ್ತಿರಿ ಎಂದು ಸಭೆಯಲ್ಲಿ ಶಾಸಕ ಆರ್​​ವಿ ದೇಶಪಾಂಡೆ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಉತ್ತರಿಸಿದ ವೈದರು ನಾವು ಯಾರಿಂದಲೂ ಕೇಳಿ ಪಡೆಯುತ್ತಿಲ್ಲ. ಅವರೆ ಖುಷಿಯಿಂದ ಕೊಟ್ಟರಷ್ಟೇ ತಗೋತೆವೆ ಎಂದಿದ್ದಾರೆ.

ವೈದ್ಯರ ಮಾತಿಗೆ ಕೆಂಡಾಮಂಡಲರಾದ ಶಾಸಕ ದೇಶಪಾಂಡೆ, ಏನು ನಿಮ್ಮ ಮಾತಿನ ಅರ್ಥ. ಯಾರ ಬಳಿ ಕೇಳಲ್ಲ, ಕೊಟ್ಟಷ್ಟು ತಗೋತೀವಿ ಅಂದರೆ ಏನರ್ಥ. ಮಾನ ಮರ್ಯಾದೆ ಇಲ್ವಾ ನಿಮಗೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಇದುವರೆಗೆ ಪಡೆದ ಹಣದ ಮಾಹಿತಿ ಪಡೆಯುವಂತೆ ತಹಸೀಲ್ದಾರ್​​ಗೆ ನಿರ್ದೇಶಿಸಿದ್ದಾರೆ.

ನಾನೇನು ಮಂತ್ರಿ ಸ್ಥಾನಕ್ಕೆ ಅಪೇಕ್ಷೆ ಇಟ್ಟಿಲ್ಲ ಎಂದ ಶಾಸಕ ಆರ್​​ವಿ ದೇಶಪಾಂಡೆ
ಮಂತ್ರಿ ಸ್ಥಾನದ ವಿಚಾರವಾಗಿ ಮಾತನಾಡಿದ ಅವರು, ಹೊಸ ಶಾಸಕರು ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಎಲ್ಲರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುವುದು ಸಹಜ. ಮಂತ್ರಿ ಆಗಬೇಕಂತ ನನಗೆ ಅತಿ ಆಸೆ ಇಲ್ಲ. ಅವರಿಗೆ ಬೇಕಾದರೆ ನನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿ. 9 ಬಾರಿ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ್ದೆನೆ. ಏಳೆಂಟು ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ್ದೆನೆ. ಮಂತ್ರಿ ಮಾಡಿ ಅಂತ ನಾನ್ಯಾರಿಗೂ ಕೇಳಲ್ಲ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಅವರು ನನ್ನ ತಮ್ಮನಿದ್ದಂತೆ. ಸಚಿವರು ಹಾಗೂ ಅಧಿಕಾರಿಗಳು ಗೌರವದಿಂದ ಕಾಣುತ್ತಾರೆ. ನನ್ನ ಕ್ಷೇತ್ರಕ್ಕೆ ಬೇಕಾಗಿರುವ ಎಲ್ಲ ಕೆಲಸಗಳು ಆಗುತ್ತಿವೆ. ಹೀಗಾಗಿ ನಾನೇನು ಮಂತ್ರಿ ಸ್ಥಾನಕ್ಕೆ ಅಪೇಕ್ಷೆ ಇಟ್ಟಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ ಹೇಳಿದ್ದಾರೆ.

Leave a Reply

Your email address will not be published. Required fields are marked *