ಬೆಂಗಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್: ಐವರು ಅರೆಸ್ಟ್

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಬೆಂಗಳೂರು
ಇಲ್ಲಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  50 ಲಕ್ಷ ರೂ. ಮೌಲ್ಯದ ನಕಲಿ ಸಿಗರೇಟ್ ಬಾಕ್ಸ್‌ಗಳನ್ನು ಪೊಲೀಸರು ವಶಕ್ಕೆ ಪಡೆದು, 5 ಮಂದಿಯನ್ನು ಬಂಧಿಸಿದ್ದಾರೆ.

ಅಬ್ದುಲ್ ಬಷೀದ್ ಹಾಗೂ ಮಗ ಮೊಹಮದ್ ಅಶೀಕ್ ಸೇರಿದಂತೆ ಮಹಮದ್ ಅನ್ಸರ್, ಮಹಮದ್ ಅನ್ಸಾರಿ, ಗುಲಾಮ್ ಹುಸೇನ್ ಖಾನ್ ಬಂಧಿತ ಆರೋಪಿಗಳು.

ನಕಲಿ ಸಿಗರೇಟ್ ಜಾಲದ ಬಗ್ಗೆ ಅನ್ವೇಷ್ ಐಪಿಆರ್ ಸಂಸ್ಥೆ ನೀಡಿದ ದೂರಿನ ಮೇರೆಗೆ ತಂದೆ ಹಾಗೂ ಮಗ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಐಟಿಸಿ ಹಾಗೂ ಎಸ್ಸೆ ಸಂಸ್ಥೆಯ ನಕಲಿ ಸಿಗರೇಟ್‌ಗಳನ್ನು ವಿದೇಶಗಳಿಂದ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಸದ್ಯ ಐವರನ್ನು ಬಂಧಿಸಿ ನಕಲಿ ಸಿಗರೇಟ್ ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *