ಸರಕಾರಿ ಕಚೇರಿಗಳ ಸಮಯ ಬದಲಾವಣೆಗೆ ಸ್ವಾಗತ: ಬಸವರಾಜ ಬಳೂಂಡಗಿ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳು ಮತ್ತು ಬೆಳಗಾವಿ ವಿಭಾಗದ
ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಏಪ್ರಿಲ್, ಮೇ ಯಲ್ಲಿ ಸರಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿರುವುದಕ್ಕೆ ಸರಕಾರಿ ನೌಕರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೌಕರರ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1-30ರವರಿಗೆ ಕಚೇರಿ ಸಮಯ ಬದಲಾವಣೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಿಗೆ ಮತ್ತು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಮನವಿ ಪರಿಗಣಿಸಿ ಸರಕಾರ ಆದೇಶ ಮಾಡಿದೆ. ಈ ಆದೇಶ ಜಾರಿಗಾಗಿ ಪ್ರಯತ್ನಿಸಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್ ಷಡಾಕ್ಷರಿಗೆ ಹಾಗೂ ಕಚೇರಿ ಸಮಯ ಬದಲಾವಣೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ಸಂಘದ ಪರವಾಗಿ ಧನ್ಯವಾದ ತಿಳಿಸಿದ್ದಾರೆ

Leave a Reply

Your email address will not be published. Required fields are marked *