Site icon ಸುದ್ದಿ ಸಂಗ್ರಹ

ನಾಳೆ ನಾಲವಾರ ಮಠಕ್ಕೆ ಸಿಎಂ ಸಿದ್ಧರಾಮಯ್ಯ

ಸುದ್ದಿ ಸಂಗ್ರಹ ಚಿತ್ತಾಪುರ
ಕಲಬುರಗಿ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀಕ್ಷೇತ್ರ ನಾಲವಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಕರ್ತೃ ಗದ್ದುಗೆ ಹಾಗೂ ಪೀಠಾಧಿಪತಿಗಳಾದ ಪರಮಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದರ್ಶನಾಶೀರ್ವಾದ ಪಡೆಯಲಿದ್ದಾರೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ಹೇಳಿದರು.

ನಾಳೆ (ಶನಿವಾರ) ಸಂಜೆ 4 ಗಂಟೆಗೆ ಶ್ರೀಕ್ಷೇತ್ರಕ್ಕೆ ಆಗಮಿಸಲಿರುವ ನಾಡದೊರೆಯ ಜೊತೆಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ, ಮುಜರಾಯಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಸುರೇಶ, ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ, ಸಣ್ಣ ಕೈಗಾರಿಕಾ ಖಾತೆ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು, ಮುಖಂಡರು ಪೂಜ್ಯರ ದರ್ಶನಾಶೀರ್ವಾದ ಪಡೆಯಲಿದ್ದಾರೆ ಎಂದರು.

ಕಳೆದ ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ನಡೆಯುವ ಹಲವು ಸಮಾರಂಭಗಳಲ್ಲಿ ನಾಡಿನ ಮುಖ್ಯಮಂತ್ರಿಗಳು, ರಾಜ್ಯಪಾಲರು, ಕೇಂದ್ರ ಸಚಿವರು ಭಾಗವಹಿಸುತ್ತಾ ಬಂದಿರುತ್ತಾರೆ, ಪ್ರಸ್ತುತ ಸಿದ್ದರಾಮಯ್ಯನವರು ಐದನೇ ಮುಖ್ಯಮಂತ್ರಿಗಳಾಗಿ ಶ್ರೀಮಠಕ್ಕೆ ಆಗಮಿಸುತ್ತಿರುವರು. ನಾಲವಾರ ಶ್ರೀಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜ್ಯರ ದರ್ಶನಾಶೀರ್ವಾದ ಪಡೆಯಲು ಕೋರಿದ್ದಾರೆ.

Exit mobile version