ಲಂಚ ಪಡೆಯುವಂತೆ PSI ಒತ್ತಡ: ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

ಜಿಲ್ಲೆಯ

ಸುದ್ದಿ ಸಂಗ್ರಹ ವಿಜಯಪುರ
ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಮತ್ತು ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ.

ಪಿಎಸ್‌ಐ ಸೀತಾರಾಮ್ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಮತ್ತು ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ.

ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್ ಮತ್ತು ದೂರುದಾರರಿಂದ 10,000 ರೂ.ಯಿಂದ 1 ಲಕ್ಷ ರೂ.ವರೆಗೆ ಸಿಬ್ಬಂದಿ ಹಣ ವಸೂಲಿ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ.

ಇನ್ನು ಹಣ ವಸೂಲಿಗೆ 5.0 ಕೋಡ್ ಅಂದ್ರೆ 50,000 ರೂ. ಹೀಗೆ ಕೋಡ್ ಬಳಸಿ ಹಣ ವಸೂಲಿ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್ ಹಾಗೂ ಮಾವಾ (ತಂಬಾಕು), ವೇಶ್ಯಾವಾಟಿಕೆ ಸೇರಿದಂತೆ ಅನೇಕ ವ್ಯವಹಾರಗಳಿಂದ ವಸೂಲಿಗೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *