ಸುದ್ದಿ ಸಂಗ್ರಹ ಕಲಬುರಗಿ
ವಿವಿಧತೆಯಲ್ಲಿ ಏಕತೆ ಸಾರುವ ನಮ್ಮ ದೇಶದ ಹಿರಿಮೆ, ಉಡುಗೆ-ತೊಡುಗೆ, ಆಚಾರ-ವಿಚಾರ, ಸಂಸ್ಕೃತಿ, ಸಂಪ್ರದಾಯ ಉಳಿಸಿ, ಬೆಳೆಸುವುದು ಅಗತ್ಯವಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಡಿ.ಬಿ ಬಿರಾದಾರ ಹೇಳಿದರು.
ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ವಿಜ್ಞಾನ ಮತ್ತು ವಾಣಿಜ್ಯ ಡಿಗ್ರಿ ಕಾಲೇಜಿನಲ್ಲಿ ಗುರುವಾರ ಜರುಗಿದ ಎಥ್ನಿಕ್ ಡೇ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಸಂಸ್ಕೃತಿ, ಸಂಪ್ರದಾಯ ಇಡಿ ವಿಶ್ವದಲ್ಲೇ ಶ್ರೇಷ್ಟವಾಗಿದೆ. ವಿದೇಶಿ ಸಂಸ್ಕೃತಿಗೆ ಮಾರುಹೋಗಿ ನಮ್ಮತನ ಮರೆಯಬಾರದು ಎಂದರು.
ಚಿಂತಕ ಡಾ.ರಾಜಶೇಖರ ಪಾಟೀಲ ಮಾತನಾಡಿ, ನಮ್ಮ ಸಂಸ್ಕೃತಿ, ಸಂಪ್ರದಾಯ ಮರೆತರೆ ನಮಗೆ ಉಳಿಗಾಲವಿಲ್ಲ ಎಂಬುದನ್ನು ಮರೆಯಬಾರದು. ನಮ್ಮ ಆಹಾರ, ಬಟ್ಟೆ ಸೇರಿದಂತೆ ಎಲ್ಲಾ ಆಚರಣೆಯಲ್ಲಿ ವಿಜ್ಞಾನ, ವೈಚಾರಿಕೆತಯಿದೆ. ಯುವ ಜನತೆ ಹೊಸ ಸಂಪ್ರದಾಯ ಹುಟ್ಟು ಹಾಕಲು ಕೈ ಹಾಕುತ್ತಿರುವುದು ಹೊಸ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಆದ್ದರಿಂದ ವಿದ್ಯಾರ್ಥಿ ದಿಸೆಯಿಂದಲೆ ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ, ದೇಶಭಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್. ಬಿರಾದಾರ, ಸಂಸ್ಥೆಯ ಅಧ್ಯಕ್ಷ ಡಾ.ಎಚ್.ಬಿ ಕಂಟೆಗೋಳ, ಪ್ರಾಂಶುಪಾಲೆ ನೇಹಾ ಎಚ್.ಕಂಟೆಗೋಳ, ಉಪನ್ಯಾಸಕರಾದ ಶಿವಲಿಂಗಪ್ಪಾ ತಳವಾರ, ರೋಹಿಣಿ ತೋರಣ, ನೀಲಮ್ಮ ಹಿರೇಮಠ, ಅಕಿಲಾ ಕೆರೂರ್, ಉಮಾ ಟಿ., ಶ್ರೀದೇವಿ ಕೌಂಟೆ, ವರ್ಷಿಣಿ, ಸಿಬ್ಬಂದಿಗಳಾದ ಭರತಕುಮಾರ, ಅಣ್ಣಾರಾಯ ಮತ್ತು ವಿದ್ಯಾರ್ಥಿಗಳು ಇದ್ದರು.