Site icon ಸುದ್ದಿ ಸಂಗ್ರಹ

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಯೂನಿಟ್‌ಗೆ 56 ಪೈಸೆ ಹೆಚ್ಚಳ…..ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಕರ್ನಾಟಕದ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಶಾಕ್ ಕೊಟ್ಟಿದೆ, ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ (KERC) ಆದೇಶ ಹೊರಡಿಸಿದೆ…….2024-25ರ ಆರ್ಥಿಕ ವರ್ಷದಲ್ಲಿ ವಿದ್ಯುತ್ ಮಾರಾಟದಿಂದ ಆಯೋಗವು ಸುಮಾರು 34,084 ಕೋಟಿ ರೂ ಆದಾಯದ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ವಾಸ್ತವದಲ್ಲಿ 32,019 ಕೋಟಿ ರೂ ಮಾತ್ರ ಸಂಗ್ರಹವಾಗಿದ್ದು, ಸುಮಾರು 2,068 ಕೋಟಿ ರೂಪಾಯಿಗಳಷ್ಟು ಬೃಹತ್ ಆದಾಯದ ಕೊರತೆಯುಂಟಾಗಿದೆ. ಈ ಆರ್ಥಿಕ ಕೊರತೆ ಸರಿದೂಗಿಸಲು ಗ್ರಾಹಕರಿಂದಲೆ ಹಣ ಸಂಗ್ರಹಿಸಲು ಕೆಇಆರ್‌ಸಿ ಆದೇಶ ಮಾಡಿದೆ……ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಿ ಆದೇಶಿಸಿದೆ. ಎಸ್ಕಾಂ ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಕೆಇಆರ್‌ಸಿ ಮನವಿ ಮಾಡಿತ್ತು…..ಈ ನೂತನ ದರ ಏರಿಕೆಯೂ ಮೇ ತಿಂಗಳಿನಿಂದ ಜಾರಿಗೆ ಬರಲಿದೆ. ಅಂದರೆ ಗ್ರಾಹಕರು ಮೇ ತಿಂಗಳಲ್ಲಿ ಪಡೆಯುವ ಬಿಲ್‌ನಲ್ಲಿ ಪ್ರತಿ ಯೂನಿಟ್‌ಗೆ 56 ಪೈಸೆಯಷ್ಟು ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ.

Exit mobile version