ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ. ಪರಮೇಶ್ವರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಏನಿದು ಪ್ರಕರಣ ?
ಚಿಕ್ಕೋಡಿ vs ವಿಜಯಪುರ ನಡುವೆ ಕಬಡ್ಡಿ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ಚಿಕ್ಕೋಡಿ ತಂಡ ಗೆಲ್ಲುವುದಾಗಿ ಪರಮೇಶ್ವರ್‌ ಅವರು 500 ರೂಪಾಯಿ ಬೆಟ್ಟಿಂಗ್‌ ಕಟ್ಟಿದ್ದರು. ವಿಜಯಪುರ ತಂಡ ಗೆದ್ದ ಬಳಿಕ ಡಿಸಿಗೆ 500 ರೂಪಾಯಿ ಹಣ ನೀಡಿದ್ದರು ಸಚಿವರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ನಾಗಭೂಷಣ್ ಎಂಬುವವರು ಕೋರ್ಟ್‌ಗೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಕೋರ್ಟ್‌, ಗೃಹಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ಸೂಚನೆ ನೀಡಿದೆ.

Leave a Reply

Your email address will not be published. Required fields are marked *