ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇಂದು ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ. ನಾಳೆ (ಏ.30) 24 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಮೇ 1ರಂದು ರಾಯಚೂರು, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಸೇರಿದಂತೆ ಒಟ್ಟು 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಮೇ 2ರಂದು ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಸಮಯದಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆ ಸಾಧ್ಯತೆ ಎಂದು ತಿಳಿಸಿದೆ.