ಸುದ್ದಿ ಸಂಗ್ರಹ ಬೆಂಗಳೂರು
ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.62 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ.
ಬ್ಯಾಂಕಾಕ್‌ನಿಂದ ಬಂದ ಮೂವರು ಪ್ಯಾಸೆಂಜರ್ ಬಳಿ ಇದ್ದ 18.62 ಕೋಟಿ ರೂ. ಮೌಲ್ಯದ 52.68 ಕೆಜಿ ಹೈಡ್ರೋಪೊನಿಕ್ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿ ಎನ್‌ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿಸಿದ್ದಾರೆ.