ಸುದ್ದಿ ಸಂಗ್ರಹ ಬ್ರೆಸಿಲಿಯಾ
ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲೆಟ್ ಸೇರಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ವಿಮಾನದಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು. ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಸಾವೊ ಪಾಲೊಗೆ ತೆರಳುತ್ತಿದ್ದ ವಿಮಾನ ಪತನಗೊಂಡಿದೆ.
ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ವಿಮಾನ ಕಟ್ಟಡಕ್ಕೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.