ಅಂಬೇಡ್ಕರ್ ಜಯಂತಿ ಪೋಸ್ಟರ್ ಬಿಡುಗಡೆ

ನಗರದ

ಸುದ್ದಿ ಸಂಗ್ರಹ ಶಹಾಬಾದ
ನಗರದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ನಿಮಿತ್ತ ಮೇ.13 ರಂದು ಸಂಜೆ 5 ಗಂಟೆಗೆ ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದ ವಾಲ್ ಪೋಸ್ಟರ್‌ ಶನಿವಾರ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆಗೊಳಿಸಿದರು.

ಜಯಂತ್ಯೋತ್ಸವ ಸಮಿತಿಯಿಂದ ಪ್ರತಿ ವರ್ಷ ಡಾ.ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದ್ದು, ಕಲಬುರ್ಗಿಯಲ್ಲಿ ಈ ಬಾರಿಯ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತೆನೆ ಎಂದು ತಿಳಿಸಿದ್ದಾರೆ ಎಂದು ದಸಂಸ ರಾಜ್ಯ ಸಂ.ಸಂಚಾಲಕ ಮರಿಯಪ್ಪ ಹಳ್ಳಿ ಮತ್ತು ತಾಲೂಕ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ರಾಜೇಶ ಯನಗುಂಟಿಕರ ತಿಳಿಸಿದರು.

ಈ ಸಂದರ್ಭದಲ್ಲಿ ಕಾಡಾ ನಿಗಮದ ಅಧ್ಯಕ್ಷ ಡಾ.ಎಂ.ಎ ರಶೀದ, ಜಯಂತ್ಯೋತ್ಸವ ಸಮಿತಿ ಗೌರವಾಧ್ಯಕ್ಷ ವಸಂತ ಕಾಂಬಳೆ, ಪ್ರಧಾನ ಕಾರ್ಯದರ್ಶಿ ಸುಭಾಷ ಸಾಕ್ರೆ, ಮುಖಂಡರಾದ ಮಾಣಿಕ ಪಾಟೀಲ, ಹಾಷಿಮ್‌ ಖಾನ್‌, ಮಲ್ಲಣ್ಣ ಮಸ್ಕಿ, ಮಲ್ಲಿಕಾರ್ಜುನ ಕಟ್ಟಿ ಮತ್ತು ಹರೀಶ ಕರಣಿಕ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *