ಸುದ್ದಿ ಸಂಗ್ರಹ ಚಿತ್ತಾಪುರ
ಇಂದಿನ ಸಮಾಜದಲ್ಲಿ ಮದ್ಯವ್ಯಸನವು ಮಾನವ ಜೀವನದ ಮೌಲ್ಯಗಳನ್ನು ಕುಗ್ಗಿಸುತ್ತಿದ್ದು, ಯುವಪೀಳಿಗೆ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯವಾಗಿದೆ ಎಂದು ಕಂಬಳೇಶ್ವರ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯರು ಹೇಳಿದರು.
ಪಟ್ಟಣದ ಕಂಬಳೇಶ್ವರ ಸಂಸ್ಥಾನ ಮಠದಲ್ಲಿ ಈಚೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಮಾಜಮುಖಿ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ‘2051ನೇ ಮದ್ಯ ವರ್ಜನ ಶಿಬಿರದ’ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಬಸಪ್ಪ ಸಲದಾಪೂರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಲಬುರಗಿ ಪ್ರಾದೇಶಿಕ ಕಚೇರಿ ನಿರ್ದೇಶಕ ದಿನೇಶ ಪೂಜಾರಿ, ಯಾದಗಿರಿ ಜಿಲ್ಲಾ ನಿರ್ದೇಶಕ ವಸಂತಗೌಡ ಬಿ, ಶಿಕ್ಷಕ ಸಿದ್ದಲಿಂಗ ಬಾಳಿ ಮಾತನಾಡಿದರು.
ಶಿಬಿರಾರ್ಥಿಗಳಿಗೆ ಬಹುಮಾನ ವಿತರಣೆ: ಶಿಬಿರದಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ಪ್ರಗತಿ ತೋರಿದ ಶಿಬಿರಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಹಲವಾರು ಶಿಬಿರಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು.
ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಭಾಗದ ಗಣ್ಯರು, ಶಿಬಿರಾರ್ಥಿಗಳು, ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿಯ ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ತಾಲೂಕು ಯೋಜನಾಧಿಕಾರಿ ಗುರುರಾಜ ಬಿ. ಸ್ವಾಗತಿಸಿದರು. ಜನಜಾಗೃತಿ ಕಲಬುರಗಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ರಾಜೇಶ ಕೆ ವಂದಿಸಿದರು.