ಸಚಿವ ಡಾ.ಶರಣಪ್ರಕಾಶ ಪಾಟೀಲ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಚಾಂದಪಾಶಾ ಮೋಮೀನ್ ಮನವಿ‌

ತಾಲೂಕು

ಸುದ್ದಿ ಸಂಗ್ರಹ ಚಿಂಚೊಳಿ
ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸುಲೇಪೇಟ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಾಂದಪಾಶಾ ಮೋಮೀನ್ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಅತ್ಯಂತ ಪ್ರಭಾವಿ ನಾಯಕರಾಗಿರುವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಉನ್ನತ ಜವಾಬ್ದಾರಿ ನೀಡುವುದು ಪಕ್ಷದ ಹಿತದೃಷ್ಟಿಯಿಂದ   ಸಮಯೋಚಿತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಗರಡಿಯಲ್ಲಿ ಬೆಳೆದಿರುವ ಡಾ.ಶರಣಪ್ರಕಾಶ ಪಾಟೀಲ್ ಅವರು ಶಿಸ್ತು, ಬದ್ಧತೆ, ಸರಳತೆ ಹಾಗೂ ಜನಸೇವೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದಾರೆ. ಖರ್ಗೆಯವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ, ಜನಪರ ಆಡಳಿತ ಮತ್ತು ಸಮಾಜದ ಎಲ್ಲ ವರ್ಗಗಳೊಂದಿಗೆ ಬೆರೆತು ಕೆಲಸ ಮಾಡುವ ಸಾಮರ್ಥ್ಯ ಡಾ. ಪಾಟೀಲರು ರೂಢಿಸಿಕೊಂಡಿದ್ದಾರೆ. ಹೀಗಾಗಿ ಇಂತಹ ಸಿದ್ದಾಂತ ನಿಷ್ಠೆ ಹಾಗೂ ಅನುಭವ ಸಂಪನ್ನ ನಾಯಕರಿಗೆ ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಹೈಕಮಾಂಡ್ ನೀಡುವ ಗೌರವದ ಸಂಕೇತವಾಗಲಿದೆ ಎಂದಿದ್ದಾರೆ.

ಡಾ.ಶರಣಪ್ರಕಾಶ ಪಾಟೀಲ್ ಅವರು ಅತ್ಯಂತ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸಮಾಜದ ಎಲ್ಲ ಒಳಪಂಗಡಗಳನ್ನು ಒಗ್ಗೂಡಿಸಿಕೊಂಡು ಮುನ್ನಡೆಸುವ ಸಾಮರ್ಥ ಅವರಲ್ಲಿ ಇದೆ. ಕ್ಷೇತ್ರದ ಅಭಿವದ್ದಿ ಹಾಗೂ ಹಿತರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವದ ಪುನರ್ ರಚನೆಯಾಗುತ್ತಿರುವ ಈ ಸಂದರ್ಭದಲ್ಲಿ ಡಾ. ಪಾಟೀಲರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬುದು ಬೇಡಿಕೆಯಾಗಿದೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ ಸಚಿವರಾಗಿ ಅವರು ತಂದಿರುವ ಪಾರದರ್ಶಕ ಆಡಳಿತ, ಜನಪರ ಯೋಜನೆಗಳು ಮತ್ತು ಕ್ರಾಂತಿಕಾರಕ ಸುಧಾರಣೆಗಳು ರಾಜ್ಯಕ್ಕೆ ಮಾದರಿಯಾಗಿವೆ. ಇಂತಹ ಪ್ರಾಮಾಣಿಕ ಹಾಗೂ ದಕ್ಷ ಆಡಳಿತಗಾರರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಅತ್ಯುನ್ನತ ಜವಾಬ್ದಾರಿ ನೀಡುವುದರಿಂದ ಹೊಸ ಸರಕಾರದ ಘನತೆ ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *