ಸುದ್ದಿ ಸಂಗ್ರಹ ಜೇವರ್ಗಿ
ತಾಲೂಕಿನ ಕೆಲ್ಲೂರ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಕೆಕೆಆರ್‌ಟಿಸಿ ಬಸ್ ಮಂಗಳವಾರ ಸಂಜೆ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಈ ಪೈಕಿ ಸಿಂಧನೂರಿನ ಶಿವಲಿಂಗಮ್ಮ ಸಿದ್ದಣ್ಣ, ಪದ್ಮ ಸತ್ಯನಾರಾಯಣ, ಶ್ರಾವ್ಯ ರಾಘವೇಂದ್ರ, ಭಾಗ್ಯಲಕ್ಷ್ಮಿ, ಮೀನಾಕ್ಷಿ, ಸಮರ್ಥ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಬಸ್ ಕಲಬುರಗಿ ನಗರದಿಂದ ಧರ್ಮಸ್ಥಳಕ್ಕೆ ಮಂಗಳವಾರ ಮಧ್ಯಾಹ್ನ ಹೊರಟಿತ್ತು. ತಾಲೂಕಿನ ಕೆಲ್ಲೂರ ಗ್ರಾಮದ ಬಳಿ ಚಾಲಕ ನೀರು ಕುಡಿಯುತ್ತಾ ಬಸ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಕಲಬುರಗಿ ಬಸ್ ಘಟಕ-3ಕ್ಕೆ ಸೇರಿದ ಈ ಬಸ್‌ನಲ್ಲಿ 50ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದರು. ಗಾಯಗೊಂಡವರನ್ನು ತಕ್ಷಣವೇ ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.