ಬಿಎಸ್‌ವೈ ನಿವಾಸಕ್ಕೆ ಭೇಟಿ: ಕಾರ್ಯಕ್ರಮಕ್ಕೆ ಬರುವಂತೆ ಡಿಕೆಶಿ ಆಹ್ವಾನ

ನಗರದ

ಸುದ್ದಿ ಸಂಗ್ರಹ ಬೆಂಗಳೂರು
ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.

ಇದೆ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ಯಶಸ್ವಿಯಾಗಿ ನಡೆಸಲು ಮತ್ತು ರಾಜ್ಯದ ಅಭಿವೃದ್ಧಿಗೆ ವಿರೋಧ ಪಕ್ಷದ ಕಡೆಯಿಂದ ಅಗತ್ಯ ಸಹಕಾರ ನೀಡಬೇಕೆಂದು ಹಿರಿಯ ನಾಯಕನಲ್ಲಿ ಕೋರಿಕೊಂಡರು.

ಇಂದು ಸಂಜೆ ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಭವ್ಯ ‘ಗಾಜಿನ ಮನೆ’ಯಲ್ಲಿ ಪ್ರಮಾಣವಚನ ಜರುಗಲಿದೆ. ಈ ಕ್ಷಣಕ್ಕೆ ಸಾಕ್ಷಿಯಾಗಲು ಯಡಿಯೂರಪ್ಪನವರನ್ನು ಡಿಕೆಶಿ ಖುದ್ದಾಗಿ ಆಹ್ವಾನಿಸಿದ್ದಾರೆ.

Leave a Reply

Your email address will not be published. Required fields are marked *