ಸುದ್ದಿ ಸಂಗ್ರಹ ಬೆಂಗಳೂರು
ಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರ ವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕಡಲ ಕಡೆಗೆ ಹೋಗಬೇಡಿ ಎಂದು ಎಚ್ಚರಿಕೆ ನೀಡಲಾಗಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ಕಣ್ಗಾಗವಲಿರಿಸಿದ್ದು, ಈ ಮಳೆಗಾಲದ ಮೊದಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಜಿಲ್ಲೆಯಾದ್ಯಂತ ತುಂತುರು ಮಳೆಯಾಗುತ್ತಿದೆ.