ಸುದ್ದಿ ಸಂಗ್ರಹ ಬೆಂಗಳೂರು
ಬನಶಂಕರಿ ಸಂಚಾರ ಠಾಣೆಯ ಎಎಸ್‌ಐ ಕಾಂತರಾಜು ಅವರ ಪುತ್ರ ಶ್ರೀಹರ್ಷ ಬಿ.ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ರಾಜ್ಯದ ಕೀರ್ತಿ ಹೆಚ್ಚಿಸಿದ್ದಾರೆ.
ಶ್ರೀಲಂಕಾದ ನೆಗೊಂಬೋದಲ್ಲಿ ನಡೆದ ಇಂಟರ್‌ನ್ಯಾಷನಲ್ ಅಂಡ್ ಥಾಯ್ ಮಾರ್ಷಲ್ ಆರ್ಟ್ಸ್ ಏಷ್ಯನ್ ಗೇಮ್ಸ್-2026 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶ್ರೀಹರ್ಷ, ಸ್ಪರ್ಧೆಯ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಆಟಗಾರನ ವಿರುದ್ಧ ಸೋಲಿಸಿ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ.
ಕನಕಪುರ ಮೂಲದ ಶ್ರೀಹರ್ಷ, ಸರ್ಕಾರದ ಯಾವುದೆ ನೆರವಿಲ್ಲದೆ ಈ ಸಾಧನೆ ಮಾಡಿದ್ದಾರೆ ಎನ್ನುವುದು ವಿಶೇಷ.
ಅವರ ಸಾಧನೆಯನ್ನು ಗುರುತಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದ್ದಾರೆ.