8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ವಾಡಿ
ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಚಿತ್ತಾಪುರ ತಾಲೂಕಿನ ವಾಡಿ ಪೊಲೀಸರು ಬಂಧಿಸಿದ್ದಾರೆ.

ದರೋಡೆ ಮಾಡಿ ಪರಾರಿಯಾಗಿದ್ದ ಚಿತ್ತಾಪುರ ತಾಲೂಕಿನ ಕಡಬೂರ ಗ್ರಾಮದ ಅಹ್ಮದ್ ಷಾ ಮತ್ತು ಅಕ್ರಮ ಶಸ್ತ್ರಾಸ್ತ್ರ ಬಂದೂಕು ತಯಾರು ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಚಿತ್ತಾಪುರ ತಾಲೂಕಿನ ಸ್ಟೇಷನ್ ನಾಲವಾರ ತಾಂಡಾದ ನಿವಾಸಿ ನಿಂಗಪ್ಪ ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದರು‌‌.

ಆರೋಪಿಗಳನ್ನು ಹುಡುಕಾಟ ನಡೆಸಿದ ವಾಡಿ ಪೊಲೀಸರು ನಿನ್ನೆ ಖಚಿತ ಮಾಹಿತಿ ಮೇರೆಗೆ ಜಾಲ ಬಿಸಿ ಇಬ್ಬರನ್ನು ಪ್ರತ್ಯೇಕ ಕಡೆ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Leave a Reply

Your email address will not be published. Required fields are marked *