ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ಜೂನ್ 14ರಿಂದ 5 ದಿನಗಳವರೆಗೆ ಕರ್ನಾಟಕದ ಕೆಲವೆಡೆ ವರುಣಾರ್ಭಟ ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಉತ್ತರ ಒಳನಾಡಿನಲ್ಲಿ ಪ್ರಸ್ತುತ ಒಣ ಹವೆ ಇದ್ದರೂ, ಮುಂದಿನ ದಿನಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಉತ್ತರ ಒಳನಾಡಲ್ಲಿ ಜೂನ್ 14 ರಿಂದ 18 ರವರೆಗೆ ಕೆಲವು ಕಡೆಗಳಲ್ಲಿ ಶೇ.50 ರಷ್ಟು ಕಡೆ, ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್, ಕೊಪ್ಪಳ, ಯಾದಗಿರಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ದಾರವಾಡ, ಗದಗ, ಹಾವೇರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ. ಉಳಿದಂತೆ ಮೈಸೂರು, ಕೊಡಗು, ಹಾಸನಕ್ಕೆ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿಯ 2 ಜಿಲ್ಲೆಗಳಲ್ಲಿ ಮಾತ್ರ ಶುಕ್ರವಾರದವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಬೆಂಗಳೂರು ಹವಾಮಾನ ವರದಿ
ಮುಂದಿನ 3 ದಿನಗಳ ಬೆಂಗಳೂರಿನ ಹವಾಮಾನ ವರದಿ ನೋಡುವುದಾರೆ, ಜೂನ್ 15 (ಸೋಮವಾರ): ಭಾಗಶಃ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 32°C (90°F) ಆಸುಪಾಸಿನಲ್ಲಿರಲಿದೆ. ಜೂನ್ 16 (ಮಂಗಳವಾರ): ಮೋಡ ಮತ್ತು ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ತುಂತುರು ಮಳೆಯಾಗುವ 61% ಸಂಭವವಿದೆ. ಜೂನ್ 17 (ಬುಧವಾರ): ಗರಿಷ್ಠ ತಾಪಮಾನ 31°C (87°F) ಇರಲಿದ್ದು, ಸಂಜೆ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *