ಕೊಲ್ಲೂರು ಮೂಕಾಂಬಿಕೆ ಸನ್ನಿಧಾನದಲ್ಲಿ ಅನಂತ್‌ ಅಂಬಾನಿ ವಿಶೇಷ ಪೂಜೆ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಉಡುಪಿ
ರಿಲಯನ್ಸ್‌ ಇಂಡಸ್ಟ್ರೀಸ್‌ ಕಂಪನಿ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಅವರು ಬೈಂದೂರು ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ

ತಮ್ಮ ಕುಟುಂಬದ ಗುರೂಜಿಯವರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅನಂತ ಅಂಬಾನಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದರು. ದೇವಾಲಯದ ಸಾಂಪ್ರದಾಯಿಕ ಆಚರಣೆಗಳ ಪ್ರಕಾರ ದೇವಿಯ ಕೃಪೆಗೆ ಪಾತ್ರರಾದ ಅವರಿಗೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

ಅನಂತ ಅಂಬಾನಿ ಅವರು ದೇವಸ್ಥಾನದ ಧಾರ್ಮಿಕ ನಿಯಮಾವಳಿಗಳಿಗೆ ಅನುಗುಣವಾಗಿ ವಿಶೇಷ ಪೂಜೆ ಸಲ್ಲಿಸಿ, ಗರ್ಭಗುಡಿಯ ಎದುರು ಕೆಲಕಾಲ ಪ್ರಾರ್ಥನೆ ನಡೆಸಿದರು.

ಇತ್ತೀಚಿನ ದಿನಗಳಲ್ಲಿ ಅನಂತ್‌ ಅಂಬಾನಿ ಅವರು ದೇಶದಾದ್ಯಂತ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಗಮನ ಸೆಳೆದಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಟೆಂಪಲ್ ರನ್ ನಡೆಸುತ್ತಿರುವ ಅವರು, ಇದೀಗ ಕರಾವಳಿಯ ಪ್ರಸಿದ್ಧ ಶಕ್ತಿಪೀಠವಾದ ಕೊಲ್ಲೂರಿಗೂ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

Leave a Reply

Your email address will not be published. Required fields are marked *