ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಕಾಂತ ಏರಿ ನೇಮಕ

ನಗರದ

ಸುದ್ದಿ ಸಂಗ್ರಹ ಕಲಬುರಗಿ
‌ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಕಾಂತ ಏರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

ಈ ಹಿಂದೆ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಗಳಾಗಿದ್ದ ಮಹೇಶ ಹೂಗಾರ ಅವರು ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದರಿಂದ ಜಿಲ್ಲಾ ಕಾರ್ಯದರ್ಶಿ ಸ್ಥಾನ ತೆರವಾದ ಹಿನ್ನೆಲೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರ ಅನುಮೋದನೆ ಪಡೆದುಕೊಂಡು ಆರೋಗ್ಯ ಇಲಾಖೆ ನಿರ್ದೇಶಕ ಚಂದ್ರಕಾಂತ ಏರಿ ಅವರಿಗೆ ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *