ಸುದ್ದಿ ಸಂಗ್ರಹ ಶಹಾಬಾದ್
ನಗರದಿಂದ ತೊನಸನಳ್ಳಿ (ಎಸ್) ಮಾರ್ಗವಾಗಿ ಜೇವರ್ಗಿ ಕ್ರಾಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ 10 ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಶಾಸಕ ಬಸವರಾಜ ಮತ್ತಿಮೂಡ್ ತಿಳಿಸಿದ್ದಾರೆ.
ಫಿರೋಜಾಬಾದ್ ಕ್ರಾಸ್–ಶಹಾಬಾದ್ ರಾಜ್ಯ ಹೆದ್ದಾರಿ ಸಂಪೂರ್ಣ ಹಾಳಾದ ಕಾರಣ ರಸ್ತೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಲೋಕೋಪಯೋಗಿ ಇಲಾಖೆ ಅಫಜಲಪುರ ಮತಕ್ಷೇತ್ರದ ವ್ಯಾಪ್ತಿಗೆ ಬರುವ ರಸ್ತೆಗೆ 5.75 ಕೋಟಿ ರೂ, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಗೆ ಬರುವ ರಸ್ತೆಗೆ 5 ಕೋಟಿ ರೂ ಅನುದಾನಕ್ಕೆ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ. ಶೀಘ್ರದಲ್ಲಿಯೇ ಟೆಂಡರ್ ಕರೆದು, ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.