ಸುದ್ದಿ ಸಂಗ್ರಹ ಕಲಬುರಗಿ
ಕೆಕೆಆರ್‌ಟಿಸಿ ಬಸ್‌ನ ಹೆಡ್‌ಲೈಟ್ ಮಂದವಾಗಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ ಮಾಡಿ ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟವಾಡಿದ ಘಟನೆ ಗಂಭೀರವಾಗಿ ಪರಿಗಣಿಸಿ ನಿಗಮದ ಕಲಬುರಗಿ ವಿಭಾಗ–1ರ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್ ಚಾಲಕ ಮತ್ತು ಇಬ್ಬರು ತಾಂತ್ರಿಕ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಜುಲೈ 4ರಂದು ರಾತ್ರಿ ಕಲಬುರಗಿಯಿಂದ ಚಿಂಚೋಳಿಗೆ ಹೊರಟಿದ್ದ ಬಸ್‌ನ ಹೆಡ್‌ಲೈಟ್ ಸರಿಯಾಗಿ ದೀಪ ಹೊರಸೂಸುತ್ತಿರಲಿಲ್ಲ. ಹೀಗಾಗಿ ಬಸ್ ನಿರ್ವಾಹಕ ಮತ್ತು ಇತರ ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಿಂಚೋಳಿ ತಲುಪಿತ್ತು.
ಬಸ್‌ನ ಹೆಡ್‌ಲೈಟನ್ನು ಸರಿಯಾಗಿ ದುರಸ್ತಿ ಮಾಡದ ಚಿಂಚೋಳಿ ಘಟಕದ ತಾಂತ್ರಿಕ ಸಿಬ್ಬಂದಿ ಶಿವಾನಂದ, ದುರಸ್ತಿ ಮಾಡಿದ್ದನ್ನು ಸರಿಯಾಗಿ ಪರಿಶೀಲಿಸದ ತಾಂತ್ರಿಕ ಮೇಲ್ವಿಚಾರಕ ಬಸವರಾಜ ಹಾಗೂ ಹೆಡ್‌ಲೈಟ್‌ನ ತಾಂತ್ರಿಕ ಸಮಸ್ಯೆ ಇದ್ದರೂ ಬಸ್ ಚಾಲನೆ ಮಾಡಿದ ಆಕಾಶ್ ಎಂಬುವವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.