ಜು.11ರಂದು ಬೆಂಗಳೂರಿನಲ್ಲಿ ನಮ್ಮ ಅಭಿಮಾನದ ಅಭಿನಂದನೆ: ಬಸವರಾಜ ಬಳೂಂಡಗಿ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ಜುಲೈ 11ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಅಂದು ಮನವಿ ಸಲ್ಲಿಸಲಾಗುವುದು ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ‘ನಮ್ಮಭಿಮಾನದ ಅಭಿನಂದನೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಭಾಗವಹಿಸುವರು ಎಂದರು.

ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಸರ್ಕಾರ ರಚಿಸಿದ್ದ ಸಮಿತಿಯ ವರದಿ ನಿರೀಕ್ಷೆಯಲ್ಲಿ ಇದ್ದೆವೆ. ವರದಿ ಬಂದ ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. ಈಗಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ತ್ವರಿತವಾಗಿ ವರದಿ ಪಡೆದು ಅನುಷ್ಠಾನಗೊಳಿಸಬೇಕು. 2006ರ ನಂತರ ನೇಮಕವಾದ ನೌಕರರ ಹಿತಾಸಕ್ತಿ ಕಾಪಾಡಬೇಕು. ಕೇಂದ್ರ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ರಾಜ್ಯದ ನೌಕರರಿಗೂ ನೀಡಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಲಾಗುತ್ತಿದೆ ಎಂದರು.

ನಮ್ಮಾಭಿಮಾನ ಸಮಾರಂಭವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸರ್ಕಾರಿ ನೌಕರರು, ಶಿಕ್ಷಕರು, ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ, ನಮ್ಮ ಜಿಲ್ಲೆಯಿಂದ 400ಕ್ಕೂ ಹೆಚ್ಚು ನೌಕರರು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಂ.ಬಿ ಪಾಟೀಲ, ಜಿಲ್ಲಾ ಕಾರ್ಯದರ್ಶಿ ಚಂದ್ರಕಾಂತ ಏರಿ, ಖಜಾಂಚಿ ಶ್ರೀಮಂತ ಪಟ್ಟೇದಾರ, ರಾಜ್ಯ ಪರಿಷತ್ ಸದಸ್ಯ ಧರ್ಮರಾಯ ಜವಳಿ, ಸುರೇಶ ವಗ್ಗೆ‌ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *