ಶಹಾಬಾದ್: ಜು.15ರಂದು ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ

ನಗರದ

ಸುದ್ದಿ ಸಂಗ್ರಹ ಶಹಾಬಾದ್
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಜು.15ರಂದು ಪತ್ರಿಕಾ ದಿನಾಚರಣೆ, ಛಾಯಾಚಿತ್ರ ಪ್ರದರ್ಶನ ಮತ್ತು ಎಸ್‌ಎಸ್‌ಎಲ್’ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಲಾಗಿದೆ ಎಂದು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಲೋಹಿತ ಕಟ್ಟಿ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.15 ರಂದು ಬೆಳಗ್ಗೆ 11 ಗಂಟೆಗೆ ಲಕ್ಷ್ಮಿಗಂಜನ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ, ಶಾಸಕ ಬಸವರಾಜ ಮತ್ತಿಮೂಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಛಾಯಗ್ರಾಹಕರಾದ ಖಾಜಾ ಪಟೇಲ, ನಾರಾಯಣ ಜೋಶಿ ಅವರ ಛಾಯಾಚಿತ್ರ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಡಾ ಅಧ್ಯಕ್ಷ ಡಾ.ಎಂ.ಎ ರಶೀದ, ತಹಸೀಲ್ದಾರ್ ನೀಲಪಭ ಬಬಲಾದ, ಡಿವೈಎಸ್‌ಪಿ ಶಂಕರಗೌಡ ಪಾಟೀಲ, ತಾ.ಪಂ ಇಒ ಮಲ್ಲಿನಾಥ ರಾವೂರ, ಪೌರಾಯುಕ್ತ ಫಕ್ರೋದ್ದಿನ್‌ ಸಾಬ್, ಸಿಡಿಪಿಒ ಶಿವಶರಣಪ್ಪ ಭೂಶೆಟ್ಟಿ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಜಕುಮಾರ ಉದನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫೀರೋಜಾಬಾದ್, ಕಾರ್ಯದರ್ಶಿ ವಾಸುದೇವ ಚವ್ಹಾಣ, ಸಮಾಜ ಸೇವಕ ಡಾ.ಫಾರೂಕ್ ಮಣ್ಣೂರ, ಸರಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಶಿವಪುತ್ರ ಕರಣಿಕ ಉಪಸ್ಥಿತರಿರುವರು.

ಪತ್ರಕರ್ತ ಸಂಘದ ತಾಲೂಕ ಅಧ್ಯಕ್ಷ ಕೆ.ರಮೇಶ ಭಟ್ಟ ಅಧ್ಯಕ್ಷತೆ ವಹಿಸಿಸುವರು. ನಿಂಗಣ್ಣ ಜಂಬಗಿ, ಶಿವುಕುಮಾರ ಕುಸಾಳೆ, ದಾಮೋಧರ ಭಟ್ಟ, ಮ.ಮುಸ್ತಾಕ್, ಶ್ರೀಪಾದ ಭಟ್ಟ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *