ಕಲಬುರಗಿ: ಸೆಂಟ್ರಲ್ ‌ಜೈಲಿನಿಂದ‌ ಮೂವರು ಸಜಾ‌ ಕೈದಿಗಳು ಪರಾರಿ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ನಗರದ ಹೊರವಲಯದ ಹೆದ್ದಾರಿಯಲ್ಲಿರುವ ಕೇಂದ್ರ ಕಾರಾಗೃಹದಿಂದ (ಸೆಂಟ್ರಲ್ ಜೈಲು) ಮೂವರು ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ಮಂಗಳವಾರ ನಸುಕಿ‌ನ ಜಾವ 4 ಗಂಟೆ ಸುಮಾರಿಗೆ ನಡೆದಿದೆ.

ಮಸ್ತಾನ್, ಸಂತೋಷ್ ಮತ್ತು ಸಾಗರ್ ಪರಾರಿಯಾದ ಕೈದಿಗಳು. ಬೀದರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ.

ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಮಧ್ಯರಾತ್ರಿ ಲಾಕಪ್‌ನಲ್ಲಿ ಇರಬೇಕಾದ ಕೈದಿಗಳನ್ನು ಜೈಲು ಸಿಬ್ಬಂದಿ ಯಾಕೆ ಹೊರಗೆ ಬಿಟ್ಟರು ಎಂಬ ಪ್ರಶ್ನೆ ಮೂಡಿದೆ. ಈ ಮೂಲಕ ಕೈದಿಗಳ ಪರಾರಿಗೆ ಜೈಲಿನ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.3 ರಂದು ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಮಂಜಾನಾಥ್ ಪರಾರಿಯಾಗಿದ್ದು. ಕಳೆದ ಒಂದು ವಾರದ ಹಿಂದೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಠಾಣೆಗೆ ಪೊಲೀಸರು ಕರೆತಂದಿದ್ದರು.

Leave a Reply

Your email address will not be published. Required fields are marked *