ಮನೆ ಮನೆಗೆ ಹೋಗದೆ ಒಂದೆ ಕಡೆ ಕುಳಿತು SIR ಪ್ರಕ್ರಿಯೆ: BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಜಿಲ್ಲೆ

ಸುದ್ದಿ ಸಂಗ್ರಹ ಚಿಕ್ಕೋಡಿ
ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR ಪ್ರಕ್ರಿಯೆಯನ್ನು ಒಂದೆ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ.

ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಅಧಿಕಾರಿಗಳು ಮನೆ ಮನೆಗೆ ತೆರಳದೆ ಸಮುದಾಯ ಭವನದಲ್ಲೇ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸರ್ಕಾರದ ನಿಯಮದಂತೆ ಮಾಹಿತಿ ಸಂಗ್ರಹಿಸದೆ, ಫೋನ್ ಕರೆ ಮೂಲಕ ಮಾಹಿತಿ ಪಡೆದು ಫಾರ್ಮ್ ಭರ್ತಿ ಮಾಡಲಾಗುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರಶ್ನಿಸಿದ ಸಾರ್ವಜನಿಕರಿಗೆ BLO ಅಧಿಕಾರಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಮೇಲಾಧಿಕಾರಿಗಳ ಗಮನಕ್ಕೂ ವಿಷಯ ತಂದರೂ ಯಾವುದೆ ಕ್ರಮವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿಯಮ ಉಲ್ಲಂಘನೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *