15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

ನಗರದ

ಸುದ್ದಿ ಸಂಗ್ರಹ ಬೆಂಗಳೂರು
ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದಾಗಿ ಸಿಎಂ ಡಿಕೆ ಶಿವಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹತ್ವದ ನಿರ್ಧಾರಗಳನ್ನೂ ಪ್ರಕಟಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿರುವುದಾಗಿ ಮಾಹಿತಿ ನೀಡಿದರು.

ಜೊತೆಗೆ ಹಾಸ್ಟೆಲ್ ಗಳ ಬೆಡ್‌ಕಾಟ್ ಖರೀದಿಗೆ 30 ಕೋಟಿ ಕೊಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಅಲೆಮಾರಿ ಜನಾಂಗಕ್ಕೆ ಮನೆ ಕಟ್ಟಲು 10 ಲಕ್ಷ ರೂ. ಹಣ ಕೊಡಲಾಗಿದೆ. ಮೊದಲ ಬಾರಿಗೆ ರಾಯಚೂರಿನಲ್ಲಿ 11 ಕೋಟಿ ಹಣದಲ್ಲಿ ಎಐ ತಂತ್ರಜ್ಞಾನದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಮೆಡಿಕಲ್‌ ಕಾಲೇಜು ಹಾಸ್ಟೆಲ್ ಕಟ್ಟಿಸಲು ಅನುಮತಿ ಕೊಡಲಾಗಿದೆ. ಕಲಬುರ್ಗಿಯಲ್ಲಿ ರಾಜ್ಯದ ಹೆದ್ದಾರಿಗಳ ಅಭಿವೃದ್ಧಿಗೆ ಅನುಮತಿ ಕೊಡಲಾಗಿದೆ ಎಂದು ತಿಳಿಸಿದರು.

ಲೋಕಭವನದಲ್ಲಿ 27 ಕೋಟಿ ಭವನಕ್ಕೆ ಅನುಮೂದನೆ ಕೊಡಲಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ನಗರದ ಕಪಿಲಾ ನದಿಗೆ 70 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮಕ್ಕೆ ಮತ್ತು ಕೆಪಿಎಸ್ಸಿ ಅಧ್ಯಕ್ಷರ ಅಮಾನತ್ತಿಗೆ ಅನುಮೋದನೆ ನೀಡಲಾಗಿದೆ. ಹಿರಿಯೂರು ತಾಲೂಕಿನಲ್ಲಿ 116 ಕೆರೆಗಳ ಕಾಮಾಗಾರಿ 244 ಕೋಟಿ ರೂ. ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದ್ರು.

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ವಿಚಾರ ಕುರಿತು ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಫಲಾನುಭವಿಗಳಿಗೆ ಹೋಗುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಯಾರನ್ನೂ ಯೋಜನೆಯಿಂದ ತೆಗೆಯೊದಿಲ್ಲ. ವೈಯಕ್ತಿಕವಾಗಿ ಬಿಟ್ಟರೆ ಬಿಡಲಿ ಎಂದು ಹೇಳಿದರು.

Leave a Reply

Your email address will not be published. Required fields are marked *