ಸುದ್ದಿ ಸಂಗ್ರಹ ಬೆಂಗಳೂರು
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇಂದು (ಜುಲೈ 19) ರಂದು ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ಆಗಿದೆ. ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಗೃಹಲಕ್ಷ್ಮಿ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿಯೊಂದು ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದ್ರೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಪರಿಷ್ಕರಣೆಗೆ ಮುಂದಾಗಿದ್ದು, ಅರ್ಹ ಫಲಾನುಭವಿಗಳ ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಖಾತೆ ಇರುವುದು ಕಡ್ಡಾಯಗೊಳಿಸಲಾಗಿದೆ.
ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಗೃಹಲಕ್ಷ್ಮಿ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯವಾಗಿದೆ. ಅವರದ್ದೇ ಫೋನ್ ನಂಬರ್ ಇರಬೇಕು. ಬೇರೆ ಯಾರದೊ ನಂಬರ್ ಕೊಟ್ಟು ಅವರಿಗೆ ಮೆಸೇಜ್ ಹೋಗಬಾರದು. ಗಂಡನ ಖಾತೆ ಮತ್ತು ಮಕ್ಕಳ ಖಾತೆ ಕೂಡ ಇರಬಾರದು. ಮಹಿಳೆಯರ ಅಕೌಂಟ್ಗೆ ಸರ್ಕಾರದ ಹಣ ಹೋಗಬೇಕು ಎಂದು ವಿವರಿಸಿದರು.
ನಮ್ಮ ಗ್ಯಾರಂಟಿ ತಂಡ ಹೋಗಿ ಮಾಹಿತಿ ಪಡೆಯಬೇಕು. ಇದಕ್ಕಾಗಿ 20 ಕೋಟಿ ರೂ ಇಟ್ಟಿದ್ದೆವೆ. ಫಾರಂ ಯಾವ ರೀತಿ ಇರಬೇಕು ಎಂದು ಚರ್ಚಿಸಲಾಗಿದ್ದು, ಗಂಡನ ಖಾತೆ ಮತ್ತು ಮಕ್ಕಳ ಖಾತೆ ಕೂಡ ಇರಬಾರದು. ಮಹಿಳೆಯರ ಅಕೌಂಟ್ಗೆ ಸರ್ಕಾರದ ಹಣ ಹೋಗಬೇಕು. ಯೋಜನೆಯಿಂದ ಯಾರನ್ನು ತೆಗೆಯುವ ಉದ್ದೇಶವಿಲ್ಲ. ನಾವು ಕೊಡುವ ಹಣ ಅವರಿಗೆ ಸರಿಯಾಗಿ ತಲುಪಬೇಕು ಎಂದು ಸ್ಪಷ್ಟಪಡಿಸಿದರು.
ಆಪರೇಷನ್ ಗೃಹಲಕ್ಷ್ಮಿ
ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ” ಹೆಸರಿನಲ್ಲಿ ನಿಜವಾದ ಫಲಾನುಭವಿಗಳನ್ನು ಗುರುತಿಸುವ ಕೆಲಸ ಮಾಡುತ್ತಿದೆ. ಪ್ರತಿಯೊಂದು ಕುಟುಂಬದ ಯಜಮಾನಿಗೆ 2,000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದರೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ. ಒಟ್ಟು 1.20 ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಮೃತಪಟ್ಟವರನ್ನು ಕೈಬಿಡಲಾಗಿದೆ. ಸದ್ಯ 4.30 ಲಕ್ಷ ಫಲಾನುಭವಿಗಳ ಹೆಸರನ್ನು ಡಿಲೀಟ್ ಮಾಡಲಾಗಿದ್ದು, ಈ ಮೂಲಕ ನೂರಾರು ಕೋಟಿ ರೂ. ಉಳಿತಾಯವಾಗಲಿದೆ.