ಕಲಬುರಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಕಲಬುರಗಿ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ ಅತಿಥಿ ಉಪನ್ಯಾಸಕರು/ಅತಿಥಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಚಿಂಚೋಳಿ ತಾಲೂಕಿನ ಅಣವಾರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕ, ಅಫಜಲಪುರ ತಾಲೂಕಿನ ಬಡದಾಳ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ ಮತ್ತು ಇಂಗ್ಲಿಷ್‌ ಅತಿಥಿ ಶಿಕ್ಷಕ, ಜೇವರ್ಗಿ ಮೌಲಾನಾ ಆಜಾದ್‌ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ, ಕಲಬುರಗಿ ಡಬರಾಬಾದ್‌ ಕ್ರಾಸ್‍ನ ಲಕ್ಷ್ಮಿನಗರದ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ ಹಾಗೂ ಅಳಂದ ತಾಲೂಕಿನ ಕೋರಳ್ಳಿ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಚಿತ್ತಾಪುರ ತಾಲೂಕಿನ ದಂಡೋತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಅತಿಥಿ ಶಿಕ್ಷಕ, ಜೇವರ್ಗಿ ತಾಲೂಕಿನ ಯಾಳವಾರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ ಮತ್ತು ಗಣಿತ ಅತಿಥಿ ಶಿಕ್ಷಕ, ರಾವೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂಗ್ಲಿಷ್‌ ಮತ್ತು ವಿಜ್ಞಾನ ವಿಷಯಗಳ ಅತಿಥಿ ಶಿಕ್ಷಕ ಹಾಗೂ ಚಿತ್ತಾಪುರ ತಾಲೂಕಿನ ಸಾತನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಣಿತ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆಯ ದಿನವಾಗಿದೆ. ಮಾಹಿತಿಗಾಗಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿ ಯನ್ನು ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *