ಸುದ್ದಿ ಸಂಗ್ರಹ ಕಲಬುರಗಿ
ಜುಲೈ 24ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಸರಕಾರಿ ಐಟಿಐ ಕಾಲೇಜು ಹಿಂದೆ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾಭ್ಯಾಸದ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್, ಭಾವಚಿತ್ರಗಳು ಮತ್ತು ಆಧಾರ್ ಕಾರ್ಡ್‌ನೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಕಚೇರಿ ದೂರವಾಣಿ ಸಂಖ್ಯೆ 08472–274846, ಮೊಬೈಲ್ ಸಂಖ್ಯೆ 9036069143 ಸಂಪರ್ಕಿಸಲು ಕೋರಲಾಗಿದೆ.