ಕಲಬುರಗಿ: ಬರಪೀಡಿತ ಜಿಲ್ಲೆ ಎಂದು ಘೋಷಿಸಿ 50 ಸಾವಿರ ಪರಿಹಾರಕ್ಕೆ ಆಗ್ರಹ

ಪಟ್ಟಣದ

ಸುದ್ದಿ ಸಂಗ್ರಹ ಚಿತ್ತಾಪುರ
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿ, ಪ್ರತಿ ಎಕರೆಗೆ 50 ಸಾವಿರ ಪರಿಹಾರ ಹಣ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಮಂಡಲ ಪದಾಧಿಕಾರಿಗಳು ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ಮಂಜೂರುಗೊಳಿಸಿ ರೈತರಿಗೆ ಭರವಸೆಯಾಗಬೇಕು. ಈಗಾಗಲೆ ರೈತರು ಬಿತ್ತಿದ ಹೆಸರು, ಉದ್ದು, ತೊಗರಿ ಎಲ್ಲ ಬೆಳೆಗಳು ಮಳೆ ಇಲ್ಲದೆ ಒಣಗಿ ಹೋಗುತ್ತಿವೆ ಎಂದು ಪತ್ರದಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ ಹೂಗಾರ, ಮಲ್ಲಿಕಾರ್ಜುನ ಮಾಲಗತ್ತಿ, ಮುಖಂಡರಾದ ಆನಂದ ಪಾಟೀಲ್ ನರಿಬೋಳ, ಶಿವರಾಂ ಚವಾಣ್, ರಮೇಶ ಬಮ್ಮನಳ್ಳಿ, ಪ್ರಭು ಗಂಗಾಣಿ, ದಶರಥ ದೊಡ್ಡಮನಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *