ಸುದ್ದಿ ಸಂಗ್ರಹ ಕಲಬುರಗಿ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಕಿರಣಗಿಯ ವ್ಯಕ್ತಿಗೆ ಇಲ್ಲಿನ ಜಿಲ್ಲಾ ಕೋರ್ಟ್ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದೆ.
ತಾಲೂಕಿನ ಹೊನ್ನಕಿರಣಗಿಯ ನಿವಾಸಿ ನಾಗಯ್ಯ ಸ್ವಾಮಿ (40) ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. 2024ರ ಏಪ್ರಿಲ್ 17ರಂದು ಈರಣ್ಣ ನೀರು ತರಲು ಹೋದಾಗ ನಾಗಯ್ಯ ಆತನ ತಲೆ ಮೇಲೆ ಪರ್ಸಿ ಕಲ್ಲು ಎತ್ತಿಹಾಕಿ ಕೊಂದಿದ್ದ. ಈ ಕುರಿತು ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ಗಳಾದ ಬಾಲಚಂದ್ರ ಹಾಗೂ ಮಲ್ಲಿಕಾರ್ಜುನ ಇಕ್ಕಳಕಿ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎ.ವಿ ಶ್ರೀನಾಥ, ಅಪರಾಧಿ ನಾಗಯ್ಯಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರಿ ಅಭಿಯೋಜಕ ಎಸ್.ಆರ್ ನರಸಿಂಹಲು ವಾದ ಮಂಡಿಸಿದ್ದರು.