ಸುದ್ದಿ ಸಂಗ್ರಹ ಜಾಲಹಳ್ಳಿ
ಸಮೀಪದ ಚಿಂಚೋಡಿ ಗ್ರಾ.ಪಂ ವ್ಯಾಪ್ತಿಯ ಬಸ್ಸಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಕಳ್ಳರು ಸುಮಾರು 70 ಸಾವಿರ ಬೆಲೆ ಬಾಳುವ ದೇವಿಯ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ದೇವಸ್ಥಾನದ ಪೂಜಾರಿ ಯಂಕೋಬ ನಾಯಕ ತೋಟದ್ ಅವರು ಜುಲೈ 29ರಂದು ಬೆಳಿಗ್ಗೆ ಪೂಜೆ ಮುಗಿಸಿ ದೇವಸ್ಥಾನಕ್ಕೆ ಬೀಗ ಹಾಕಿಕೊಂಡು ಮನೆಗೆ ತೆರಳಿದ್ದರು. ಮರುದಿನ ಜುಲೈ 30ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದಾಗ ಗರ್ಭಗುಡಿಯಲ್ಲಿದ್ದ ದೇವಿಯ ಬೆಳ್ಳಿಯ ಆಭರಣಗಳು ಕಳುವಾಗಿರುವುದು ಕಂಡುಬಂದಿದೆ. ತಕ್ಷಣ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ವೈಶಾಲಿ ಜಳಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.