ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ಸಾವು

ಜಿಲ್ಲೆಯ

ಸುದ್ದಿ ಸಂಗ್ರಹ ಮೈಸೂರು
ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಗಿಫ್ಟ್ ಬಾಲ್ ನುಂಗಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ನಡೆದಿದೆ.

ಗೌರಿಪುರ ಗ್ರಾಮದ ಮುಕುಂದ್ ಮಯೂರ್ (5) ಮೃತ ಬಾಲಕ. ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಗೌರಮ್ಮ ಶಂಕರ್ ನಾಯಕ ಅವರ ಮೊಮ್ಮಗನಾಗಿದ್ದ ಮುಕುಂದ್ ಮಯೂರ್, ಸಂತೋಷ್ ಹಾಗೂ ಐಶ್ವರ್ಯ ದಂಪತಿಯ ಏಕೈಕ ಪುತ್ರನಾಗಿದ್ದನು.

ಬಾಲ್ ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬಾಲಕನ ಸಾವಿನಿಂದ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *