ಕಲಬುರಗಿ ಅಂಚೆ ವಿಭಾಗದಲ್ಲಿ ಫ್ರಾಂಚೈಸಿ ಮಳಿಗೆಗಳಿಗೆ ಅರ್ಜಿ ಆಹ್ವಾನ

ಜಿಲ್ಲೆಯ

ಸುದ್ದಿ ಸಂಗ್ರಹ ಕಲಬುರಗಿ
ಭಾರತ ಸರ್ಕಾರದ ಅಂಚೆ ಇಲಾಖೆಯು ಸಾರ್ವಜನಿಕರಿಗೆ ಅಂಚೆ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಮತ್ತು ಸಮೀಪದಲ್ಲಿ ಒದಗಿಸುವ ಉದ್ದೇಶದಿಂದ ಕಲಬುರಗಿ ಅಂಚೆ ವಿಭಾಗದ ವ್ಯಾಪ್ತಿಯ ಆಯ್ದ ಸ್ಥಳಗಳಲ್ಲಿ ಅಂಚೆ ಕಚೇರಿ ಫ್ರಾಂಚೈಸಿ ಮಳಿಗೆಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಿದೆ ಎಂದು ಕಲಬುರಗಿ ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಿಂದ ಕಚೇರಿ ವೇಳೆಯಲ್ಲಿ ಪಡೆಯಲು ಅಥವಾ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ದಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಂಪರ್ಕಿಸಿ.

Leave a Reply

Your email address will not be published. Required fields are marked *