ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ

ನಗರದ

ಸುದ್ದಿ ಸಂಗ್ರಹ ಬೆಂಗಳೂರು
ಕೆಪಿಎಸ್‌ಸಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ಇಡಿ ದಾಳಿ ನಡೆಸಿದೆ.

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ಅವ್ಯಹಾರ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ. 13 ಕಡೆಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ನೇಮಕಾತಿಯಲ್ಲಿ ಇದ್ದ ಮಧ್ಯವರ್ತಿಗಳ ಮನೆಯ ಮೇಲೂ ದಾಳಿ ನಡೆದಿದೆ.

APS ಪಶುವೈದ್ಯಾಧಿಕಾರಿಗಳ ಹುದ್ದೆಗೆ ಅಂತಿಮ ಆಯ್ಕೆ ಪಟ್ಟಿಗೆ ಮಧ್ಯವರ್ತಿಗಳು 80 ಲಕ್ಷ ಡಿಮ್ಯಾಂಡ್ ಮಾಡಿದ್ದರು. ಟಾಪ್ ಲಿಸ್ಟ್ನಲ್ಲಿ ಅಮಾನತಾಗಿದ್ದ ಶಿವಶಂಕರಪ್ಪ ಸಾಹುಕಾರ್ ಸಂಬಂಧಿಕರು ಇದ್ದರು ಅನ್ನೋದು ಕೂಡ ಎಫ್‌ಐಆರ್‌ನಲ್ಲಿ ದಾಖಲಾಗಿತ್ತು. ರೆಸಾರ್ಟ್ನಲ್ಲಿ ಪ್ರಶ್ನೆ ಪತ್ರಿಕೆ ನೀಡಲಾಗಿತ್ತು. Ouch ಶೀಟ್‌ಗಳನ್ನು ತಿದ್ದಲಾಗಿತ್ತು. ಅಧಿಕಾರಿಗಳ ಕಡೆಯಿಂದಲೇ ಅಭ್ಯರ್ಥಿಗಳ ನಂಬರ್ ಮಧ್ಯವರ್ತಿಗಳಿಗೆ ಲೀಕ್ ಮಾಡಲಾಗಿತ್ತು ಎಂಬ ಆರೋಪವು ಕೇಳಿಬಂದಿತ್ತು.

ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇದ್ದ ಕೈಗಾರಿಕಾ ವಿಸ್ತರಣಾ ಅಧಿಕಾರಿಗಳ ಹುದ್ದೆಗೆ ನಕಲಿ ದಾಖಲೆ ಆರೋಪದಲ್ಲಿ ಶಿವಶಂಕರಪ್ಪ ಸಾಹುಕಾರ್ ಮಗಳು ಸುಮ ಸಾಹುಕಾರ್ ವಿರುದ್ಧ ದೂರು ದಾಖಲಾಗಿತ್ತು. ಜುಲೈ 10ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸುಮ ಸಾಹುಕಾರ್ ನಕಲಿ ದಾಖಲೆ ಕೊಟ್ಟಿದ್ದಾರೆಂದು ಕೆಪಿಎಸ್ಪಿ ಅಧಿಕಾರಿ ಶೋಭಾ ದೂರು ಕೊಟ್ಟಿದ್ದರು. ಸರ್ಕಾರವು ಪ್ರಕರಣದ ತನಿಖೆಯ ಜವಾಬ್ದಾರಿ ಸಿಐಡಿಗೆ ವಹಿಸಿತ್ತು. ಸಿಐಡಿ ತನಿಖೆ ನಡೆಸುತ್ತಿದ್ದಂತೆ ಪ್ರಕರಣದಲ್ಲಿ ಇಡಿ ಎಂಟ್ರಿಯಾಗಿದೆ.

ಕೆಪಿಎಸ್‌ಸಿ ಕಚೇರಿ ಮೇಲೂ ಇಆ ದಾಳಿ ನಡೆಸಿ ಪರಿಶೀಲನೆ ಮಾಡಿದೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಫ್ಲಾಟ್ ಮೇಲೆ ದಾಳಿಯಾಗಿದೆ. ದಾಳಿ ಬಳಿಕ ಶಿವಶಂಕರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *