ಸುದ್ದಿ ಸಂಗ್ರಹ ಬೆಂಗಳೂರು
ಕರ್ನಾಟಕದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, ಸಾಮಾನ್ಯ ಜನರ ಜೇಬಿಗೆ ಕತ್ತರಿ ಬಿದ್ದಿದೆ. ಕೆ.ಜಿ ಈರುಳ್ಳಿ ಬೆಲೆ ಪ್ರಸ್ತುತ 60ರಿಂದ 75ಕ್ಕೆ ತಲುಪಿದೆ. ಇದೆ ಪರಿಸ್ಥಿತಿ ಮುಂದುವರಿದರೆ ಕೆಲವೇ ದಿನಗಳಲ್ಲಿ ಈರುಳ್ಳಿ ದರ 100ರ ಗಡಿ ದಾಟುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ.
ಈ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಮಳೆ ಕೊರತೆಯಿಂದಾಗಿ ಈರುಳ್ಳಿ ಇಳುವರಿಯಲ್ಲಿ ಉಂಟಾಗಿರುವ ಕುಸಿತ. ಮಾರುಕಟ್ಟೆಗೆ ಈರುಳ್ಳಿ ಪೂರೈಕೆ ಕಡಿಮೆಯಾಗಿದ್ದು, ಅಭಾವ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಸೂಕ್ತ ಕೋಲ್ಡ್ ಸ್ಟೋರೇಜ್‌ಗಳ ಕೊರತೆಯೂ ಈರುಳ್ಳಿ ಸಂಗ್ರಹಣೆ ಮತ್ತು ಬೆಲೆ ಸ್ಥಿರತೆಯನ್ನು ಕಾಪಾಡುವಲ್ಲಿ ದೊಡ್ಡ ಸವಾಲಾಗಿದೆ.