ನಂದಗೋಕುಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ನಗರದ

ಸುದ್ದಿ ಸಂಗ್ರಹ ಶಹಾಬಾದ್
ನಗರದ ಚವ್ಹಾಣ್ ಶಿಕ್ಷಣ ಕೇಂದ್ರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಂದಗೋಕುಲ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅತ್ಯಂತ ಸಂಭ್ರಮ- ಸಡಗರದಿಂದ ಆಚರಿಸಲಾಯಿತು.

ಶಾಲೆಯ ಆವರಣವನ್ನು ವಿವಿಧ ಬಣ್ಣಗಳ ರಂಗೋಲಿ, ಹೂವುಗಳು ಮತ್ತು ಮಾವಿನ ಎಲೆಗಳಿಂದ ಸಿಂಗರಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಶಾಲೆಯ ಪುಟ್ಟ ಮಕ್ಕಳು ಶ್ರೀಕೃಷ್ಣ ಮತ್ತು ರಾಧೆಯರ ವೇಷಭೂಷಣ ಧರಿಸಿ ಎಲ್ಲರ ಗಮನ ಸೆಳೆದರು. ಕೈಯಲ್ಲಿ ಕೊಳಲು, ತಲೆಯಲ್ಲಿ ನವಿಲುಗರಿ ಧರಿಸಿದ ಬಾಲಕೃಷ್ಣರು, ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ರಾಧೆಯರ ಸನ್ನಿವೇಷವು ಶಾಲೆಯಲ್ಲಿ ಗೋಕುಲದ ವಾತಾವರಣ ಸೃಷ್ಟಿಯಾಗಿತ್ತು.

ಶಾಲೆಯ ಮುಖ್ಯಸ್ಥ ವಾಸುದೇವ ಚವ್ಹಾಣ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀಕೃಷ್ಣನ ಜೀವನ ಮತ್ತು ಸಂದೇಶಗಳು ಇಂದಿನ ಪೀಳಿಗೆಗೆ ತುಂಬಾ ಅವಶ್ಯಕ, ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಮತ್ತು ನೈತಿಕ ಮೌಲ್ಯಗಳು ಬೆಳೆಸುವ ನಿಟ್ಟಿನಲ್ಲಿ ಇಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಬ್ಬಗಳ ಆಚರಣೆ ಸಹಕಾರಿಯಾಗಿದೆ ಎಂದರು.

ಇದೆ ಸಂದರ್ಭದಲ್ಲಿ ಮಕ್ಕಳಿಗೆ ಮೊಸರು ಕುಡಿಕೆ (ದಹಿ ಹಂಡಿ) ಒಡೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಮೊಸರು ಕುಡಿಕೆಯನ್ನು ಒಡೆದು ಸಂಭ್ರಮಿಸಿದರು. ಇದಾದ ಬಳಿಕ ವಿದ್ಯಾರ್ಥಿಗಳಿಂದ ಕೃಷ್ಣನ ಭಕ್ತಿಗೀತೆಗಳ ಗಾಯನ ಮತ್ತು ಆಕರ್ಷಕ ನೃತ್ಯ ಪ್ರದರ್ಶನಗಳು ಜರುಗಿದವು.

ವೇದಿಕೆ ಮೇಲೆ ಅತಿಥಿಗಳಾಗಿ ಕಾವೇರಿ ಪಾಟೀಲ್, ಕವಿತಾ ಡೆಂಗಿ, ರಾಧಿಕಾ ಸರಡಗಿ, ಮುಸ್ಕಾನ, ಜಗದೇವಿ ಮತ್ತು ಮುಖ್ಯಗುರು ಮಲ್ಲಮ್ಮ ಮೀರಾಸ್ಕರ ಇದ್ದರು.

ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ
ವೃಂದದವರು, ಪೋಷಕರು ಮತ್ತು ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೃಷ್ಣ- ರಾಧೆಯರಿಗೆ ಬಹುಮಾನ ವಿತರಿಸಿ, ಸಿಹಿ ಹಂಚಲಾಯಿತು.

Leave a Reply

Your email address will not be published. Required fields are marked *