ಸುದ್ದಿ ಸಂಗ್ರಹ

ಉರಿಯುತ್ತಿದೆ ಉತ್ತರಕರ್ನಾಟಕ, ಎಲ್ಲಿ ಉಷ್ಣಾಂಶ ಎಷ್ಟು ?

ಸುದ್ದಿ ಸಂಗ್ರಹ ಬೆಂಗಳೂರು
ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು ಸಹಿತ ಹಲವು ಜಿಲ್ಲೆಗಳಲ್ಲಿ ಮಳೆಗಾಲದಲ್ಲೇ ಬೇಸಿಗೆ ಕಾಲದ ಅನುಭವವಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದರೆ, ಕಲಬುರಗಿಯಲ್ಲಿ 35 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಕಳೆದ 24 ಗಂಟೆ ಅವಧಿಯ ವಿವಿಧ ಜಿಲ್ಲಾ ಕೇಂದ್ರಗಳ ಉಷ್ಣಾಂಶದ ಮಾಹಿತಿ ಬಿಡುಗಡೆ ಮಾಡಿದೆ.

ಕಲ್ಯಾಣ ಕರ್ನಾಟಕದ ಬೀದರ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್‌ ಯಾದಗಿರಿಯಲ್ಲಿ 34.9 ಡಿಗ್ರಿ ಸೆಲ್ಸಿಯಸ್‌, ವಿಜಯನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್‌, ಕೊಪ್ಪಳದಲ್ಲಿ 33.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಕಿತ್ತೂರು ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್‌, ಬಾಗಲಕೋಟೆಯಲ್ಲಿ 33.7, ಹಾವೇರಿಯಲ್ಲಿ 33.6, ಧಾರವಾಡದಲ್ಲಿ32.5 ಡಿಗ್ರಿ ಸೆಲ್ಸಿಯಸ್, ಗದಗದಲ್ಲಿ 33.1 ಹಾಗೂ ವಿಜಯಪುರ ಜಿಲ್ಲೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ 33.4 ಡಿಗ್ರಿ, ಚಿತ್ರದುರ್ಗದಲ್ಲಿ 33 ಡಿಗ್ರಿ ಸೆಲ್ಸಿಯಸ್‌, ಮಲೆನಾಡಿನ ಶಿವಮೊಗ್ಗದಲ್ಲಿ 31.3 ಡಿಗ್ರಿ, ಚಿಕ್ಕಮಗಳೂರಿನಲ್ಲಿ 30.8 ಡಿಗ್ರಿ, ಹಾಸನದಲ್ಲಿ 31.2 ಡಿಗ್ರಿ ಹಾಗೂ ಕೊಡಗು ಜಿಲ್ಲೆಯಲ್ಲಿ 29.3 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿತ್ತು.

ಕರಾವಳಿ ಜಿಲ್ಲೆಗಳಾದ ಉಡುಪಿಯಲ್ಲಿ 32.5, ಉತ್ತರ ಕನ್ನಡದಲ್ಲಿ 32.2, ದಕ್ಷಿಣ ಕನ್ನಡದಲ್ಲಿ 33.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಚಾಮರಾಜನಗರ 34.1 ಡಿಗ್ರಿ, ಮೈಸೂರಿನಲ್ಲಿ 33.3 ಡಿಗ್ರಿ, ಮಂಡ್ಯದಲ್ಲಿ 33.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ, ಬೆಂಗಳೂರು ಭಾಗದ ಬೆಂಗಳೂರು ನಗರದಲ್ಲಿ 31.9 ಡಿಗ್ರಿ, ಗ್ರಾಮಾಂತರ ಜಿಲ್ಲೆಯಲ್ಲಿ 31.8 ಡಿಗ್ರಿ, ದಕ್ಷಿಣ ಜಿಲ್ಲೆಯಲ್ಲಿ 32.7 ಡಿಗ್ರಿ ದಾಖಲಾಗಿದೆ.

ತುಮಕೂರು ಜಿಲ್ಲೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್‌, ಕೋಲಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್‌, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

Leave a Reply

Your email address will not be published. Required fields are marked *