ಗಜೇಂದ್ರಗಡದಲ್ಲಿ ಪಟಾಕಿ ಕಿಡಿ ಸಿಡಿದು ಗೊಡೌನ್‌ಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿ

ಜಿಲ್ಲೆ

ಸುದ್ದಿ ಸಂಗ್ರಹ ಗದಗ
ಪಟಾಕಿ ಕಿಡಿ ಸಿಡಿದು ಪ್ಲಾಸ್ಟಿಕ್ ಪೈಪ್ ಕಿರಾಣಿ ಸಾಮಗ್ರಿಗಳು ಸಂಗ್ರಹಿಸಿಟ್ಟಿದ್ದ ಗೊಡೌನ್‌ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಸಾಮಗ್ರಿಗಳು ಬೆಂಕಿಗಾಹುತಿಯಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಜವಳಿ ಪ್ಲಾಟ್‌ನಲ್ಲಿರುವ ಗೊಡೌನ್‌ನಲ್ಲಿ ಏಕಾಏಕಿ ದಟ್ಟವಾಗಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದೆ. ಈ ಗೊಡೌನ್ ಮಹೇಶ್ ಪಾಟೀಲ್ ಎಂಬುವರಿಗೆ ಸೇರಿದ್ದಾಗಿದೆ.

ಗೊಡೌನ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಮತ್ತು ಕಿರಾಣಿ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ.

ಏಕಾಏಕಿ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಆತಂಕಗೊಂಡಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಘಟನೆಯ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *